More

  ದರ್ಶನ್​ ಫೋಟೋ ಹಿಡಿದು ಕಿಲೋ ಮೀಟರ್​ಗಟ್ಟಲೆ ಪಾದಯಾತ್ರೆ..ದೇವರ ಮೊರೆ ಹೋದ್ರು ಡಿ ಬಾಸ್​ ಫ್ಯಾನ್ಸ್!​

  ರಾಯಚೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ದರ್ಶನ್​ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಡಿ ಬಾಸ್​​ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.

  ನಟನ ಫೋಟೋ ಹಿಡಿದು ಪಾದಯಾತ್ರೆ ಮಾಡಿ ದೇವರಿಗೆ ದರ್ಶನ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.ಯರಡೋಣಿ ಗ್ರಾಮದ ಡಿ. ಬಾಸ್ ಸಂಘದ ಅಭಿಮಾನಿಗಳು ಲಿಂಗಸುಗೂರು ತಾಲ್ಲೂಕಿನ ಪ್ರಸಿದ್ಧ ಅಮರೇಶ್ವರ ದೇವರ ಮೊರೆ ಹೋಗಿದ್ದಾರೆ. ಪಾದಯಾತ್ರೆ ಮಾಡುವ ಮೂಲಕ ದೇವರಲ್ಲಿ ದರ್ಶನ್​ ಬಿಡುಗಡೆಯಾಗಲಿ ಎಂದು ಬೇಡಿಕೊಂಡಿದ್ದಾರೆ. ಸುಮಾರು 8 ಕಿ.ಮೀ. ಪಾದಯಾತ್ರೆ ಮಾಡುವ ಮೂಲಕ ಅಭಿಮಾನಿಗಳು ದೇಗುಲ ತಲುಪಿದ್ದಾರೆ. ಪಾದಯಾತ್ರೆ ಮೂಲಕ ದೇಗುಲ ತಲುಪಿ ದರ್ಶನ್ ಭಾವಚಿತ್ರಕ್ಕೆ ಮಾಲೆ ಹಾಕಿ ಪೂಜೆ ಸಲ್ಲಿಸಿದ್ದಾರೆ.

  ದರ್ಶನ್​ ಆ್ಯಂಡ್​ ಗ್ಯಾಂಗ್​ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. ಈ ಭಾಗದ ಪರಮಾತ್ಮ ಎಂದು ಶ್ರೀ ಅಮರೇಶ್ವರನನ್ನು ನಾವು ಆರಾಧಿಸುತ್ತೇವೆ. ಆ ದೇವರಲ್ಲಿ ಇಂದು ನಾವು ನಮ್ಮ ನೆಚ್ಚಿನ ನಟ ಆದಷ್ಟು ಬೇಗ ಪ್ರಕರಣದಿಂದ ಮುಕ್ತರಾಗಿ ಹೊರಗೆ ಬರಲಿ. ನಮ್ಮ ಬಾಸ್ ದರ್ಶನ್ ತಪ್ಪು ಮಾಡಿದ್ರೆ ಅದಕ್ಕೆ ಕಾನೂನು‌ ಇದೆ, ಸರ್ಕಾರ ಇದೆ. ತಪ್ಪು ಮಾಡಿದ್ದರೆ ಅದರ ಪ್ರಕಾರ ಕ್ರಮ ಆಗಲಿ. ತಪ್ಪಿತಸ್ಥರೆಂದು ತೀರ್ಮಾನವಾಗದೆ ಅಭಿಮಾನಿಗಳಿಗೆ, ಅವರಿಗೆ ನೋವು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

  ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

  See also  ವಿಟಮಿನ್ ಟ್ಯಾಬ್ಲೆಟ್ ಎಂದು ಭಾವಿಸಿ ಏರ್‌ಪಾಡ್ ನುಂಗಿದ ಮಹಿಳೆ!

  ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

  ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

  ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  “ತಾಳ್ಮೆ ಕೆಲವೊಮ್ಮೆ ಶಕ್ತಿ” ತಗಡು ಎಂದಿದ್ದ ದರ್ಶನ್​ಗೆ ಟಾಂಗ್ ಕೊಟ್ಟ ರಾಬರ್ಟ್​ ನಿರ್ಮಾಪಕ​ ಉಮಾಪತಿ ಗೌಡ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts