ಗಂಗೊಳ್ಳಿ: ಕರಾವಳಿ ಕಾವಲು ಪಡೆ, ಆರೋಗ್ಯ ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಅಗ್ನಿಶಾಮಕ ದಳ, ಗಂಗೊಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಜಂಟಿಯಾಗಿ ಗಂಗೊಳ್ಳಿ ಬಂದರಿನಲ್ಲಿ ಅಹಿತಕರ ಘಟನೆಗಳು ಸಂಭವಿಸಿದಾಗ ತುರ್ತಾಗಿ ಸ್ಪಂದಿಸುವ ಬಗ್ಗೆ ಕಲ್ಪಿತ ಕಾರ್ಯಾಚರಣೆ ನಡೆಸಲಾಯಿತು.
ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಆಗಮಿಸಿತು. ಅಲ್ಲಿ ಸಂಭವಿಸಿದ್ದ ಬೆಂಕಿ ನಂದಿಸಿ, ಅಪಾಯಕ್ಕೆ ಸಿಲುಕಿದವರನ್ನು ರಕ್ಷಿಸುವ ಪ್ರಾತ್ಯಕ್ಷಿಕೆ ನಡೆಸಲಾಯಿತು.

ಕರಾವಳಿ ಕಾವಲು ಪಡೆ ಪೋಲಿಸ್ ನಿರೀಕ್ಷಕ ವಸಂತ್ ಆಚಾರ್, ಪೊಲೀಸ್ ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್., ಗಂಗೊಳ್ಳಿ ಪಿಎಸ್‌ಐ ಬಸವರಾಜ್ ಕನಶೆಟ್ಟಿ, ಮೀನುಗಾರಿಕೆ ಇಲಾಖೆಯ ಗೋಪಾಲಕೃಷ್ಣ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಎಚ್‌ಒ ನಯನಾ ತಾಂಡೇಲ, ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ, ಕರಾವಳಿ ಕಾವಲು ಪೊಲೀಸ್ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಮೀನುಗಾರಿಕೆ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ, ಮೀನುಗಾರರು, ಸಾರ್ವಜನಿಕರು ಮೊದಲಾದವರು ಹಾಜರಿದ್ದರು.
ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಗಂಗೊಳ್ಳಿ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಟನೆ ನಡೆದರೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಕಲ್ಪಿತ ಕಾರ್ಯಾಚರಣೆ ಮೂಲಕ ಮಾಹಿತಿ ನೀಡಲಾಗಿದೆ
-ವಸಂತ ಆಚಾರ್, ಪೊಲೀಸ್ಿ ನಿರೀಕ್ಷಕರು, ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ