

ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಅತ್ರಾಡಿ ವಿಜಯ ಮಕ್ಕಳ ಕೂಟ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಶುಭಹಾರೈಸಿದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಕಲ್ಚರಲ್ ಟ್ರಸ್ಟ್ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ, ಉಪನ್ಯಾಸಕ ರಮಾಕಾಂತ್ ರೇವಣ್‌ಕರ್ ಉಪಸ್ಥಿತರಿದ್ದರು. ಅದಿತಿ ಸ್ವಾಗತಿಸಿದರು. ಆಯಿಷಾ ಅಸ್ಮಿಯಾ ವಂದಿಸಿದರು. ಶ್ರೀನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶೈನಿಶ್ ಸಹಕರಿಸಿದರು.