ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಶಿಕ್ಷಣವನ್ನು ಸ್ವಂತಕ್ಕೆ ಮಾತ್ರ ಬಳಸದೆ ಪರರಿಗೆ ಸೇವೆ ನೀಡಲು ಬಳಸಬೇಕು. ಇಂತಹ ಕೆಲಸ ಜೆರೋಮ್ ಡಿಸೋಜಾ ಮಾಡಿದ್ದಾರೆ ಎಂದು ಮಂಗಳೂರು ಮಿಲಾಗ್ರಿಸ್ ಚರ್ಚ್ ಧರ್ಮಗುರು, ಕೆಥೊಲಿಕ್ ಶಿಕ್ಷಣ ಮಂಡಳಿ ಮಾಜಿ ಕಾರ್ಯದರ್ಶಿ ಬೊನಾವೆಂಚರ್ ನಜ್ರೆತ್ ಹೇಳಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ 8 ವಷರ್ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಜೆರೋಮ್ ಡಿಸೋಜಾಗೆ ಗುರುವಾರ ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆದ ವಿದಾಯ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಸ್ಟಾೃನಿ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ದೀಪಕ್ ಲಿಯೋ ಡೆಸಾ, ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಮೋರಸ್, ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ, ಗಾರ್ಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಹೆಲೆನ್ ಲೋಬೋ, ಪಿಟಿಎ(ಪಿಯುಸಿ ವಿಭಾಗ)ಉಪಾಧ್ಯಕ್ಷರು ವಿಲಿಯಂ ಪಿಂಟೋ, ಪಿಟಿಎ (ಪ್ರೌಢಶಾಲಾ ವಿಭಾಗ) ಉಪಾಧ್ಯಕ್ಷರು ಐವನ್ ಸಿಕ್ವೇರಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ರಾಜಶೇಖರ್ ಶೆಟ್ಟಿ ಮಡಂತ್ಯಾರು, ಕಾಲೇಜು ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಹಾಗೂ ವಿದಾಯ ಸಮಾರಂಭದ ಸಂಯೋಜಕರು, ಪ್ರಭಾರಿ ಮುಖ್ಯಶಿಕ್ಷಕಿ ಶಾಂತಿ ಮೇರಿ ಡಿಸೋಜ, ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಬಂಧುಗಳು ಹಾಗೂ ವಿದ್ಯಾರ್ಥಿ ವೃಂದ, ಪಾಲಕರು ಭಾಗವಹಿಸಿದ್ದರು.
ಪ್ರಭಾರ ಮುಖ್ಯಶಿಕ್ಷಕಿ ಶಾಂತಿ ಡಿಸೋಜಾ ಸ್ವಾಗತಿಸಿದರು. ವಿದ್ಯಾರ್ಥಿ ಮೋಕ್ಷಿತ್, ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ, ಪಾಲನಾ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ನಿವೃತ್ತ ಪ್ರಾಂಶುಪಾಲರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶಿಕ್ಷಕ ವಸಂತ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು.