ಪೊಲೀಸ್ ಅಧಿಕಾರಿಗೆ ಬೀಳ್ಕೊಡುಗೆ

police
ಕುಂದಾಪುರ ನಗರ ಠಾಣೆ ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಂಡಿರುವ ನಂಜಪ್ಪ ಎನ್., ಪದೋನ್ನತಿ ಹೊಂದಿ ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿರುವ ಪೊಲೀಸ್ ಸಿಬ್ಬಂದಿ ದಿನೇಶ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು
Published on

ಗಂಗೊಳ್ಳಿ: ಗಂಗೊಳ್ಳಿಯ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷದಿಂದ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ, ಕುಂದಾಪುರ ನಗರ ಠಾಣೆ ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಂಡಿರುವ ನಂಜಪ್ಪ ಎನ್., ಪದೋನ್ನತಿ ಹೊಂದಿ ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿರುವ ಪೊಲೀಸ್ ಸಿಬ್ಬಂದಿ ದಿನೇಶ್ ಅವರನ್ನು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಭಾನುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.

ಠಾಣೆ ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್. ಅಧ್ಯಕ್ಷತೆ ವಹಿಸಿದ್ದರು. ಎಎಸ್‌ಐ ಭಾಸ್ಕರ್ ಬೈಂದೂರು, ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿ, ಕೆಎನ್‌ಡಿ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net