

ಕಾರ್ಕಳ: ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಅಖಿಲಾ ಜಿ.ಹೆಬ್ಬಾರ್‌ಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು.
ಕಳೆದ ವರ್ಷ ಸಂಸ್ಥೆಯಲ್ಲಿ ಶೇ.90ಕ್ಕೂ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಮ್ಮನ ನೆರವು ಚಾರಿಟೆಬಲ್ ಟ್ರಸ್ಟ್ ಮುಖ್ಯಸ್ಥ ಅವಿನಾಶ್ ಶೆಟ್ಟಿ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜನಾರ್ದನ್ ಇಡ್ಯಾ ಅಧ್ಯಕ್ಷತೆ ವಹಿಸಿದ್ದರು. ನಿರಂಜನ್ ಜೈನ್, ವಿಜಯ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ., ಗಂಗಾಧರ್, ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ಫ್ಯಾನಿ ಜೋಯ್ಸ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಶೋಭಾ ಕುಮಾರಿ ಸ್ವಾಗತಿಸಿದರು. ಉಪನ್ಯಾಸಕಿ ಶಾಲಿನಿ ಸನ್ಮಾನಿತರನ್ನು ಪರಿಚಯಿಸಿ, ಉಪನ್ಯಾಸಕಿ ಅಮಿತಾ ವಂದಿಸಿದರು. ಉಪನ್ಯಾಸಕ ರಂಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.