ನ್ಯಾಯಾಧೀಶ ದಿನೇಶ್ ಹೆಗ್ಡೆಗೆ ಬೀಳ್ಕೊಡುಗೆ

farewell
ಕಾರ್ಕಳ ವಕೀಲರ ಸಂಘದ ವತಿಯಿಂದ ಬೆಂಗಳೂರಿಗೆ ವರ್ಗಾವಣೆಗೊಂಡ ದಿನೇಶ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು
Published on

ಕಾರ್ಕಳ: ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ(ಸಂಚಾರಿ ಪೀಠ ಕಾರ್ಕಳ) ದಿನೇಶ್ ಹೆಗ್ಡೆ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಆ ಪ್ರಯುಕ್ತ ಕಾರ್ಕಳ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಮಂಗಳವಾರ ನಡೆಯಿತು.
ಹಿರಿಯ ವಕೀಲ ಎಂ.ಕೆ.ವಿಜಯ್ ಕುಮಾರ್, ಸರ್ಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಮಾತನಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಸಿ.ಎಸ್., ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೋಮಲಾ ಆರ್.ಸಿ., ಉಪಾಧ್ಯಕ್ಷ ಕೆ.ಹರೀಶ್ ಅಧಿಕಾರಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಸೀತಾ ಹಾಗೂ ಕಾರ್ಕಳ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಕೀಲ ಲೋಲಾಕ್ಷ ಕಾರ್ಯಕ್ರಮ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಸ್ವಾಗತಿಸಿ, ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net