More

    ಶ್ರದ್ಧೆಯಿಂದ ವ್ಯಾಸಂಗ ಮಾಡಿ ಗುರಿ ಸಾಧಿಸಿ

    ನಂಜನಗೂಡು: ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉನ್ನತ ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಬೇಕು ಎಂದು ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ನಗರದ ಜೆಎಸ್‌ಎಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಅಂತರ್ಗತವಾಗಿರುತ್ತದೆ. ಕೀಳರಿಮೆ ಭಾವನೆ ಬಿಟ್ಟು ಪ್ರತಿಯೊಬ್ಬರೂ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬುದನ್ನು ನಿಶ್ಚಯಿಸಿಕೊಂಡು ಚೆನ್ನಾಗಿ ವ್ಯಾಸಂಗ ಮಾಡಬೇಕು. ಆ ಗುರಿ ಸಾಧನೆಯೆಡೆಗೆ ಸದಾ ನಿಮ್ಮ ಚಿತ್ತ ಹರಿಸಬೇಕು ಎಂದು ಹೇಳಿದರು.

    ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ದೊಡ್ಡದು. ಹಾಗಾಗಿ ಅವರಿಗೆ ಋಣಿಯಾಗಿರಬೇಕು. ತಂದೆ-ತಾಯಿ ಶ್ರಮಕ್ಕೆ ಬೆಲೆ ಕೊಡಬೇಕು. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಬಿಟ್ಟು ಶ್ರದ್ಧೆಯಿಂದ ವ್ಯಾಸಂಗದಲ್ಲಿ ತೊಡಗಬೇಕು ಎಂದರು.

    ಮುಖ್ಯಶಿಕ್ಷಕಿ ಹಾಜಿರಾ ಬೇಗಂ ಮಾತನಾಡಿ, ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್ ಅವರು ಬಾಲಕಿಯರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಕಳೆದ 10 ವರ್ಷಗಳಿಂದಲೂ ಸ್ವಂತ ಖರ್ಚಿನಲ್ಲಿ ದಿನಪತ್ರಿಕೆ ಪೂರೈಕೆ ಮಾಡುತ್ತಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಬಡ ವಿದ್ಯಾರ್ಥಿನಿಯರ ಪ್ರವೇಶ ಶುಲ್ಕ ಭರಿಸಿ ಶಾಲೆಯ ಏಳಿಗೆಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.

    ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ, ನಗದು ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಗೌರವಾಂಬಿಕಾ, ಕಾವ್ಯಾ, ಜಯಶೀಲಾ, ಭೂಮಿಕಾ, ಶಾರದಾ, ನೀಲಾಲೋಚನಾ, ಎಂ.ಬಿ.ಪ್ರಕಾಶ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts