ಕುಂದಾಪುರ ಮೆಟ್ರಿಕ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

beelkoduge
ಬೀಳ್ಕೊಡುಗೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
Published on

ಕುಂದಾಪುರ: ಇಲ್ಲಿನ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ (ವಿಭಜನೆ)ದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಂಗಳವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ಮಾತನಾಡಿ, ವಿದ್ಯಾರ್ಥಿ ನಿಲಯದಲ್ಲಿ ಸಿಗುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸವಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆಶಾದೇವಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭೆ ಸದಸ್ಯೆ ಪ್ರಭಾವತಿ ಶೆಟ್ಟಿ, ತಾಲೂಕು ಹಿಂದುಳಿದ ವರ್ಗಗಳ ನಿವೃತ್ತ ಕಲ್ಯಾಣ ಅಧಿಕಾರಿ ಶಶಿಕಲಾ, ಪೊಲೀಸ್ ಸಿಬ್ಬಂದಿ ಶಾಹಿನಾ ಶುಭ ಹಾರೈಸಿದರು. ದ್ವಿತೀಯ ಪಿಯುಸಿಯಲ್ಲಿ ರ‌್ಯಾಂಕ್ ಪಡೆದ ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 11 ವಿದ್ಯಾರ್ಥಿಗಳನ್ನು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದ ಮೂವರು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿ ನಿಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರವ್ಯಾ ವಂದಿಸಿದರು. ಮೇನಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net