ಹೆರಿಯ ಮಾಸ್ಟರ್‌ಗೆ ಬೀಳ್ಕೊಡುಗೆ

vaddarse
ಸರಕಾರಿ ಪ್ರೌಢಶಾಲೆ ವಡ್ಡರ್ಸೆಯಲ್ಲಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಶಿಕ್ಷಕ ಹೆರಿಯ ಮಾಸ್ಟರ್ ಅವರನ್ನು ಗೌರವಿಸಲಾಯಿತು.
Published on

ಕೋಟ: ವಡ್ಡರ್ಸೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸಿ ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಗೆ ವರ್ಗಾವಣೆಗೊಂಡ ಶಿಕ್ಷಕ ಹೆರಿಯ ಮಾಸ್ಟರ್‌ಗೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ವಡ್ಡರ್ಸೆ ಶಾಲಾ ಸಭಾಂಗಣದಲ್ಲಿ ನಡೆಯಿತು.

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೆಟ್ಟಿ, ಶಿಕ್ಷಕ ಮಂಜುನಾಥ ಶೆಟ್ಟಿ, ನಿವೃತ್ತ ಉಪನ್ಯಾಸಕ ಚಂದ್ರಶೇಖರ ಶೆಟ್ಟಿ ಯಾಳಹಕ್ಲು ಮಾತನಾಡಿದರು. ನಿವೃತ್ತ ಶಿಕ್ಷಕರಾದ ಬಾಲಕೃಷ್ಣಶೆಟ್ಟಿ, ಆನಂದ ಶೆಟ್ಟಿ, ಮುಖ್ಯಶಿಕ್ಷಕಿ ಗಾಯತ್ರಿದೇವಿ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಉಷಾ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಮಕ್ಕಳು ಪಾಲ್ಗೊಂಡಿದ್ದರು. ಶಿಕ್ಷಕಿ ಗೀತಾಶೆಟ್ಟಿ ಸ್ವಾಗತಿಸಿ, ಶಿಕ್ಷಕ ಶರತ್ ವಹಿಸಿದರು, ಶಿಕ್ಷಕಿ ಗೀತಾ ನಾಯಕ್ ಅಭಿನಂದನಾ ಪತ್ರ ವಾಚಿಸಿದರು. ಶಿಕ್ಷಕಿ ಭಾರತಿ ನಿರೂಪಿಸಿದರು. ಸುಧಾಕರ ಸಂಘಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net