ರೈತ ಆತ್ಮಹತ್ಯೆಗೆ ಶರಣು

ಮಂಡ್ಯ: ಮದ್ದೂರು ತಾಲೂಕಿನ ಗೂಳೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ(43) ಮೃತರು.
ಬೇಸಾಯಕ್ಕೆಂದು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಎರಡು ಎಕರೆ ಜಮೀನಿನಲ್ಲಿ ರೇಷ್ಮೆಬೆಳೆ ಬೆಳೆದಿದ್ದು, ಅದು ನಷ್ಟವಾಗಿತ್ತು. ಇದರ ಜತೆಗೆ ಭತ್ತ, ರಾಗಿ, ಕಬ್ಬು ಬೆಳೆದು ನಷ್ಟ ಅನುಭವಿಸಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸಿಪಿಐ ಮಹೇಶ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.