More

    ರೈತ, ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಬಳ್ಳಾರಿ ಜಿಲ್ಲಾದ್ಯಂತ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ

    ಬಳ್ಳಾರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರು, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಜಿಲ್ಲೆಯ ವಿವಿಧೆಡೆ ಗುರುವಾರ ಮುಷ್ಕರ ನಡೆಸಲಾಯಿತು.

    ನಗರದಲ್ಲಿ ಗಡಿಗಿ ಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೃಷಿ, ಎಪಿಎಂಸಿ, ಭೂ ಸುಧಾರಣೆ ಕಾಯ್ದೆಗಳ ತಿದ್ದುಪಡಿ, ವಿದ್ಯುತ್, ಶಿಕ್ಷಣ, ರೈಲ್ವೆ, ವಿಮೆ, ದೂರ ಸಂಪರ್ಕ ಹಾಗೂ ಬ್ಯಾಂಕ್‌ಗಳ ಖಾಸಗೀಕರಣದ ಮೂಲಕ ಸರ್ಕಾರಗಳು ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಕಾಯ್ದೆಗಳ ತಿದ್ದುಪಡಿ ಹಾಗೂ ನೂತನ ಯೋಜನೆಗಳು ಉದ್ಯಮಿಗಳ ಪರವಾಗಿವೆ. ವಿದ್ಯಾರ್ಥಿಗಳು, ಪಾಲಕರು, ತಜ್ಞರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ ಜಾರಿಗೊಳಿಸುತ್ತಿದೆ. ಹೊಸ ಶಿಕ್ಷಣ ನೀತಿಯಿಂದ ವ್ಯಾಪಾರೀಕರಣಕ್ಕೆ ಉತ್ತೇಜನ ಸಿಗಲಿದ್ದು ಬಡವರಿಗೆ ಶಿಕ್ಷಣ ಕೈಗೆಟುಕದಂತೆ ಆಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

    ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಆದಿಮೂರ್ತಿ, ಕಾರ್ಯದರ್ಶಿ ಎಂ.ಆರ್.ಎಂ.ಇಸ್ಮಾಯಿಲ್, ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷೆ ಡಿ.ನಾಗಲಕ್ಷ್ಮಿ, ಜಿಲ್ಲಾ ಅಧ್ಯಕ್ಷ ಆರ್.ಸೋಮಶೇಖರ ಗೌಡ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜೆ.ಸತ್ಯಬಾಬು, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಸ್.ಶಿವಶಂಕರ, ಎಐಎಮ್‌ಎಸ್‌ಎಸ್ ರಾಜ್ಯ ಉಪಾಧ್ಯಕ್ಷೆ ಎಮ್.ಎನ್.ಮಂಜುಳಾ, ಜಿಲ್ಲಾ ಅಧ್ಯಕ್ಷೆ ಎ.ಶಾಂತಾ, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್, ಎಐಡಿಎಸ್‌ಒ ರಾಷ್ಟ್ರೀಯ ಉಪಾಧ್ಯಕ್ಷ ಎನ್.ಪ್ರಮೋದ್ ಹಾಗೂ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts