ಕೆರೂರ: ಸಮೀಪದ ಲಕ್ಕಸಕೊಪ್ಪ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನುಮಂತ ಭೀಮಪ್ಪ ಮುರನಾಳ ಆತ್ಮಹತ್ಯೆ ಮಾಡಿಕೊಂಡ ರೈತ. ರೈತ ಜಮ್ಮನಕಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕಿನಲ್ಲಿ 50 ಸಾವಿರ ರೂ. ಹಾಗೂ ಕಟಗೇರಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ 1 ಲಕ್ಷ ರೂ. ಸಾಲವನ್ನು ಕೃಷಿ ಚಟುವಟಿಕೆಗೆ ಮಾಡಿದ್ದರು. ಆದರೆ, ಸರಿಯಾಗಿ ಮಳೆಬಾರದೆ ಸಾಲ ತೀರಿಸಲಾಗಿದೆ. ಜು.07 ರಂದು ಮಧ್ಯಾಹ್ನ 2.30 ಗಂಟೆಗೆ ತಮ್ಮ ಜಮೀನಿನಲ್ಲಿನ ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧ ಸೇವಿಸಿದ್ದರು. ಕೂಡಲೇ ಅವರನ್ನು ಬಾಗಲಕೋಟೆ ದಡ್ಡೆನ್ನವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಮೃತ ರೈತನ ಪತ್ನಿ ರೇಣವ್ವ ಮುರನಾಳ ಕೆರೂರ ಪೋಲಿಸ್ ಠಾಣೆಯಲ್ಲಿ ದೂರ ನೀಡಿದ್ದಾಳೆ.