

ಹಾಸನ: ವಿದ್ಯುತ್ ಶಾಕ್ಗೆ ಒಳಗಾದ ಕೃಷಿಕರೊಬ್ಬರು ಸ್ಥಳದಲ್ಲೇ ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ಹಾಸನ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಹಾಸನದ ಮಾರೇನಹಳ್ಳಿ ಗ್ರಾಮದ ಶಶಿಕುಮಾರ್ (32) ಸಾವಿಗೀಡಾದವರು.
ಶಶಿಕುಮಾರ್ ಅವರು ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ತುಂಡಾಗಿ ಅವರ ಮೇಲೆ ಬಿದ್ದಿದ್ದು, ಅವರು ತೀವ್ರ ಶಾಕ್ಗೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಶಿಕುಮಾರ್ ವರ್ಷದ ಹಿಂದಷ್ಟೇ ವಿವಾಹವಾಗಿದ್ದರು.
ಚೆಸ್ಕಾಂ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳದಿಂದ ಮೃತದೇಹ ಮೇಲೆತ್ತಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿದರು. ಅಲ್ಲದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.