ಹುಕ್ಕೇರಿ: ರೈತನ ಕುಟುಂಬಕ್ಕೆ ಕತ್ತಿ ಸಾಂತ್ವನ

ಹುಕ್ಕೇರಿ: ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಜನಾರ್ಧನ ಶಂಕರ ಜಾಧವ ಮನೆಗೆ ಶಾಸಕ ಉಮೇಶ ಕತ್ತಿ ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಮೃತ ರೈತನ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸರ್ಕಾರದಿಂದ ಬರುವ ಸೌಲಭ್ಯ ಹಾಗೂ ಪರಿಹಾರ ಧನ ನೀಡುವಂತೆ ತಾಲೂಕು ಆಡಳಿತದ ಅಧಿಕಾರಿಗಳಿಗೆ ನಿರ್ದೇಶಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಪರಗೌಡ ಪಾಟೀಲ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ರಾಚಯ್ಯ ಹಿರೇಮಠ, ನಿರ್ದೇಶಕ ರಮೇಶ ಕುಲಕರ್ಣಿ, ಸತ್ತೆಪ್ಪ ನಾಯಿಕ, ತಹಸೀಲ್ದಾರ್ ರೇಷ್ಮಾ ತಾಳಿಕೋಟೆ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್.ಪಟಗುಂದಿ ಹಾಗೂ ಅಧಿಕಾರಿಗಳು ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *