More

    ರೈತರ ಸಮಸ್ಯೆ ಪರಿಹರಿಸಲು ಸರ್ಕಾರಗಳು ವಿಫಲ

    ಸೊರಬ: ದೇಶದ ಬೆನ್ನೆಲುಬು ರೈತ ಎಂಬುದು ಕೇವಲ ರಾಜಕಾರಣಿಗಳ ಹೇಳಿಕೆಗೆ ಸೀಮಿತವಾಗಿದೆಯೇ ಹೊರತು ಸರ್ಕಾರಗಳು ರೈತರ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಸುವಲ್ಲಿ ವಿಫಲವಾಗಿವೆ ಎಂದು ಪರಿಸರ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಬೇಸರ ವ್ಯಕ್ತಪಡಿಸಿದರು.

    ಬುಧವಾರ ಪಟ್ಟಣದ ಖಾಸಗಿ ಬಸ್​ನಿಲ್ದಾಣದ ವೃತ್ತದಲ್ಲಿ ತಾಲೂಕು ಗೋಸಂರಕ್ಷಣಾ ಹೋರಾಟ ಸಮಿತಿ ಹಾಗೂ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಬುಧವಾರ ಹಮ್ಮಿಕೊಂಡಿದ್ದ 5ನೇ ವರ್ಷದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಕ್ಕೆ ಅನ್ನ ನೀಡುವ ರೈತ ಬೆಳೆ ಬೆಳೆಯದಿದ್ದರೆ ಪರಿಸ್ಥಿತಿ ಏನು ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು. ರೈತರನ್ನು ಮನುಷ್ಯರಂತೆ ಕಂಡಾಗ ಮಾತ್ರ ದೇಶಕ್ಕೆ ಭವಿಷ್ಯವಿದೆ. ಪಪಂ ಎದುರಿನ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಹಂತದ ಹೋರಾಟ ನಡೆಸಲಾಗುವುದು ಎಂದರು.

    ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ ಮಾತನಾಡಿ, ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬರುವ ರಾಜಕಾರಣಿಗಳು ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ರೈತ ವೃತ್ತ ನಿರ್ವಣವಾಗಬೇಕು. ಇದಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಖಾಸಗಿ ಬಸ್ ನಿಲ್ದಾಣದ ಎದುರಿನ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣ ಮಾಡುವಂತೆ ಪಪಂ ಅಧ್ಯಕ್ಷ ಎಂ.ಡಿ.ಉಮೇಶ್ ಹಾಗೂ ಉಪಾಧ್ಯಕ್ಷ ಮಧುರಾಯ್ ಜಿ.ಶೇಟ್ ಅವರಿಗೆ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts