ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿ ಪ್ರಾಣಬಿಟ್ಟ ರೈತ

Farmer Suicide
Published on

ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗುಡ್ಡೇಹಳ್ಳಿ ಗ್ರಾಮದ ಇಂದೂಧರ್​​ ಅಲಿಯಾಸ್​ ಇಂದಪ್ಪ(62) ಮೃತ ದುರ್ದೈವಿ. ಹೊಸಕೊಪ್ಪ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಇಂದೂಧರ್​ ಕೃಷಿ ಚಟುವಟಿಕೆಗಳಿಗಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಮಳೆ ಇಲ್ಲದೆ ಬೆಳೆ ಕೈಕೊಟ್ಟ ಪರಿಣಾಮ ಸಾಲಬಾಧೆ ತಾಳಲಾರದೆ ರೈತ ಇಂದೂಧರ್​ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net