More

  ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ

  ಪಾಂಡವಪುರ: ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತು ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
  ಗ್ರಾಮದ ನಿವಾಸಿ ರೈತ ಕೆ.ಉಮೇಶ್(45) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ್ ಕ್ಯಾತನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದು, ಕೂಡು ಕುಟುಂಬದಲ್ಲಿ ವಾಸಿಸುತ್ತಿದ್ದರು. ತಂದೆಯಿಂದ ಬಳುವಳಿಯಾಗಿ ಬಂದಿದ್ದ 1.5 ಎಕರೆ ಜಮೀನಿನಲ್ಲಿ ಈ ಮೊದಲು ತರಕಾರಿ ಬೆಳೆದು ಕೈಸುಟ್ಟುಕೊಂಡಿದ್ದರು. ನಂತರದಲ್ಲಿ ವಿವಿಧ ಸಹಕಾರ ಬ್ಯಾಂಕುಗಳಿಂದ ಸಾಲ ಪಡೆದು ತೆಂಗು, ಅಡಕೆ ಜತೆಗೆ ಇತರಮಿಶ್ರ ಬೆಳೆಗಳನ್ನು ಬೆಳೆದಿದ್ದರು ಎನ್ನಲಾಗಿದೆ. ಆದರೆ ಬೆಳೆದ ಬೆಳೆ ಕೈಸೇರದೆ ಪಡೆದಿದ್ದ ಸಾಲ ಮರುಪಾವತಿಸಲಾಗದೆ ಲಕ್ಷಾಂತರ ರೂ. ಸಾಲದ ಸುಳಿಗೆ ಸಿಲುಕಿದ್ದರು. ಇದರಿಂದ ಬೇಸತ್ತ ರೈತ ಉಮೇಶ್ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯಗೆ ಶರಣಾಗಿದ್ದಾರೆ.
  ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತರ ಸಹೋದರ ಗೋಪಾಲ್ ನೀಡಿರುವ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts