More

  ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

  ಮದ್ದೂರು: ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  ಗ್ರಾಮದ ವಿ.ಎಂ.ರೂಪೇಶ (45) ಆತ್ಮಹತ್ಯೆ ಮಾಡಿಕೊಂಡವರು. ತಾಯಿ ತಾಯಮ್ಮ ಅವರ ಹೆಸರಿನಲ್ಲಿ 1.16 ಎಕರೆ ಜಮೀನಿನಲ್ಲಿ ಭತ್ತ, ರಾಗಿ ಹಾಗೂ ರೇಷ್ಮೆ ಬೆಳೆಯುತ್ತಿದ್ದರು. ತಾಯಿ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕಿನಲ್ಲಿ 48 ಸಾವಿರ ರೂ., ವಳಗೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 37 ಸಾವಿರ ಹಾಗೂ ತಮ್ಮ ಹೆಸರಿನಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 72 ಸಾವಿರ ರೂ. ಚಿನ್ನಾಭರಣಗಳ ಸಾಲ, ಪತ್ನಿ ಸುಶ್ಮಿತಾ ಹೆಸರಿನಲ್ಲಿ ಮೈಕ್ರೋ ಪೈನಾನ್ಸ್ ಮತ್ತು ಸಂಘ ಸಂಸ್ಥೆಗಳಿಂದ 4.72 ಲಕ್ಷ ರೂ.ಗಳನ್ನು ಸಾಲ ಪಡೆದಿದ್ದರು.

  ಬೆಳೆ ನಷ್ಟದಿಂದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರೂಪೇಶ್ ಪತ್ನಿ ಸುಶ್ಮಿತಾ ದೂರು ನೀಡಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ. ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಅವರು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts