ಆತ್ಮಹತ್ಯೆಗೆ ಶರಣಾದ ರೈತ

blank

ವಿಜಯವಾಣಿ ಸುದ್ದಿಜಾಲ ನರಗುಂದ

ಸಾಲಬಾಧೆ ತಾಳದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪಟ್ಟಣದಲ್ಲಿ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಪಟ್ಟಣದ ಜಮಲಾಪೂರ ಬಡಾವಣೆಯ ಶಿವಪ್ಪ ಮಹಾದೇವಪ್ಪ ಕವಡೆ (52) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಈತ ಕೃಷಿಗಾಗಿ ನರಗುಂದದ ಸಿಂಡಿಕೇಟ್ ಬ್ಯಾಂಕ್​ನಲ್ಲಿ 3.10 ಲಕ್ಷ ರೂ. ಸಾಲ ಪಡೆದಿದ್ದ. ಕಳೆದ ನಾಲ್ಕೈದು ವರ್ಷಗಳಿಂದ ಸರಿಯಾಗಿ ಬಳೆ ಬಾರದ ಕಾರಣ ಮಾನಸಿಕವಾಗಿ ನೊಂದು ಭಾನುವಾರ ರಾತ್ರಿ ಕುಟುಂಬದವರೆಲ್ಲರೂ ಮಲಗಿದ ನಂತರ ಮನೆ ಪಕ್ಕದ ದನದ ಕೊಟ್ಟಿಗೆಯಲ್ಲಿ ಉಣ್ಣೆಗೆ ಸಿಂಪರಿಸುವ ಕ್ರಿಮಿನಾಶಕ ಸೇವಿಸಿದ್ದಾರೆ.

ಅವರ ನರಳಾಟ ಕೇಳಿ ಸ್ಥಳಕ್ಕೆ ಬಂದ ಕುಟುಂಬಸ್ಥರು ಶಿವಪ್ಪ ಅವರನ್ನು ನರಗುಂದದ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರ್ದೈವವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ತುಕಾರಾಮ ಕವಡೆ ತಿಳಿಸಿದ್ದಾರೆ.

ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…