ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಖಾನಾಪುರ: ತಾಲೂಕಿನ ಅವರೊಳ್ಳಿ ಗ್ರಾಮದ ರೈತ ಕ್ರಿಮಿನಾಶಕ ಸೇವಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲಪ್ಪ ಸೋಮನಿಂಗ ನಾಗಣ್ಣವರ (73) ಮೃತ ರೈತ. ವಿವಿಧ ವಾಣಿಜ್ಯ ಸಂಸ್ಥೆಗಳಿಂದ 5.65 ಲಕ್ಷ ರೂ.ಸಾಲ ಪಡೆದಿದ್ದ ಕಲ್ಲಪ್ಪ ತಮ್ಮ ಹೊಲದಲ್ಲಿ ಕೃಷಿ ಕಾರ್ಯ ಕೈಗೊಂಡಿದ್ದರು. ಆದರೆ ಕೆಲ ವರ್ಷಗಳಿಂದ ಮಳೆ ಸರಿಯಾಗಿ ಸುರಿಯದಿದ್ದರಿಂದ ಬೆಳೆ ಒಣಗಿ ಮನನೊಂದು ಭಾನುವಾರ ತಮ್ಮ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ನಂದಗಡ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.