ಸಾಲಬಾಧೆ ತಾಳದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ತುಮಕೂರು: ಸಾಲಬಾಧೆಯನ್ನು ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿರಾ ತಾಲೂಕಿನ ಬಂದಕುಂಟೆ ಗ್ರಾಮದ ರೈತ ನರಸಿಂಹ ಮೂರ್ತಿ(55) ತಡರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

16 ಗುಂಟೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ರೈತ ವಿವಿಧ ಬ್ಯಾಂಕ್ ಹಾಗೂ ಕೈ ಸಾಲ ಸೇರಿ 4 ಲಕ್ಷ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೆ ಬೇಸತ್ತ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರತಿನಿತ್ಯ ಸಾಲಕೊಟ್ಟವರಿಂದ ಉಂಟಾಗುತ್ತಿದ್ದ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಪಟ್ಟನಾಯಕಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *