25.1 C
Bangalore
Friday, December 6, 2019

ಕೀಟನಾಶಕಗಳ ಸುರಕ್ಷಿತ ಬಳಕೆ ಅತ್ಯವಶ್ಯಕ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಯಾದಗಿರಿ: ಜಿಲ್ಲಾದ್ಯಂತ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹತ್ತಿ, ತೊಗರಿ ಹಾಗೂ ಭತ್ತದ ಬೆಳೆ ಬೆಳವಣಿಗೆಯ ಹಂತದಲ್ಲಿದ್ದು, ರೈತರು ಈ ಬೆಳೆಗಳಲ್ಲಿಯ ಪೀಡೆಗಳನ್ನು ನಿರ್ವಹಿಸಲು ಕೀಟನಾಶಕಗಳನ್ನು ಮತ್ತು ರೋಗನಾಶಕಗಳನ್ನು ಸಿಂಪರಣೆ ಮಾಡುವುದು ಸಾಮಾನ್ಯವಾಗಿದೆ. ಆದರೆ, ಕೀಟನಾಶಕಗಳನ್ನು ಸಿಂಪಡಣೆ ಮಾಡುವಾಗ ರೈತರು ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಾತಾವರಣವು ಕೀಟಗಳ ಮತ್ತು ರೋಗರಗಳ ಪ್ರಚೋದನೆಗೆ ಪೂರಕವಾಗಿದ್ದರಿಂದ ಹತ್ತಿ, ತೊಗರಿ ಮತ್ತು ಭತ್ತ ಬೆಳೆಗಳಲ್ಲಿ ಅತಿಯಾದ ಕೀಟಗಳ ಬಾಧೆಯಿಂದ ಕೀಟನಾಶಕಗಳ ಬಳಕೆಯೂ ಕೂಡಾ ಹೆಚ್ಚುತ್ತಿದೆ. ಹತ್ತಿಯಲ್ಲಿ ರಸ ಹೀರುವ, ಗುಲಾಬಿ ಕಾಯಿಕೊರಕ ಕೀಟ ಹಾಗೂ ಇತ್ತೀಚಿನ ದಿಗಳಲ್ಲಿ ಸ್ಪೋಡೊಪ್ಟರಾ ಕೀಡೆಯ ಬಾಧೆಗಳು ಕಂಡುಬರುತ್ತಿವೆ. ತೊಗರಿಯಲ್ಲಿ ಜೀಡುಗಟ್ಟುವುದು, ಎಲೆಸುರಳಿಯಾಗುವುದು ಹಾಗೂ ಕಾಂಡಗಳ ಮೇಲೆ ಮಚ್ಚೆ ರೋಗ ಮುಂತಾದವುಗಳು ಕಂಡುಬರುತ್ತಿವೆ. ಭತ್ತದಲ್ಲಿ ಕಾಂಡಕೊರೆಯುವ ಹುಳಗಳು ಮತ್ತು ಬೆಂಕಿರೋಗ ಮತ್ತು ದುಂಡಾಣು ಎಲೆಚುಕ್ಕೆ ರೋಗ ಮುಂತಾದವುಗಳ ನಿಯಂತ್ರಣಕ್ಕೆ ಪೀಡೆನಾಶಕಗಳನ್ನು ಸಿಂಪಡಿಸುತ್ತಿದ್ದಾರೆ. ಆದರೆ ಇವುಗಳನ್ನು ಬಳಸುವಾಗ ಆರೊಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದಿದ್ದಾರೆ.

ಸಿಂಪರಣೆ ಮಾಡುವಾಗ ನಾಲ್ಕೈದು ಪೀಡೆನಾಶಕಗಳನ್ನು ಮಿಶ್ರಣ ಮಾಡಿ ಸಿಂಪರಣೆ ಮಾಡುತ್ತಿರುವುದು ಸರಿಯಲ್ಲ. ಯಾವ ಕೀಟ ಅಥವಾ ರೋಗಕ್ಕೆ ಯಾವ ಪೀಡೆನಾಶಕ ಬಳಸಬೇಕೆಂದು ಕೃಷಿ ವಿಜ್ಞಾನ ಕೇಂದ್ರ ಅಥವಾ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಸಂಬಂಧಿತ ಸಂಘ-ಸಂಸ್ಥೆಗಳಿಗೆ ಭೇಟಿ ನೀಡಿ ಸರಿಯಾದ ಸಲಹೆ ಪಡೆದು ಸಿಂಪರಣೆ ಮಾಡಬೇಕು. ಇದರಿಂದ ಅನಾವಶ್ಯಕ ಕೀಟನಾಶಕಗಳ ಮೇಲೆ ತಗಲುವ ವೆಚ್ಚವನ್ನು ಕಡಿಮೆಗೊಳಿಸಬಹುದು. ಅದಲ್ಲದೇ, ಕೀಟನಾಶಕಗಳಿಂದ ಪರಿಸರ ಮೇಲೆ ಆಗುವ ದುಷ್ಪರಿಣಾಮಗಳನ್ನು ಕಡಿಮೆಗೊಳಿಸಬಹುದು ಎಂದು ಸಲಹೆ ನೀಡಿದ್ದಾರೆ.

ಕೀಟನಾಶಕಗಳನ್ನು ಸಿಂಪರಣೆ ಮಾಡುವಾಗ ರೈತರು ಮೈಮುಚ್ಚುವಂತಹ ಉಡುಪುಗಳನ್ನು ತೊಡಬೇಕು. ತಲೆಗೆ ಟೋಪಿ ಧರಿಸಿ, ಕಣ್ಣುಗಳಿಗೆ ಕನ್ನಡಕ ಹಾಕಿಕೊಳ್ಳುವುದು ಅತ್ಯವಶ್ಯಕ. ಮೂಗಿಗೆ ಸುರಕ್ಷಾ ಮಾಸ್ಕ್ ಧರಿಸಬೇಕು, ಕೈಗಳಿಗೆ ಗ್ಲೌಸ್ ಹಾಕುವುದರಿಂದ ಕೀಟನಾಶಗಳು ಚರ್ಮಕ್ಕೆ ತಗುಲುವುದನ್ನು ತಪ್ಪಿಸಬಹುದು. ಆದಷ್ಟು ಮಟ್ಟಿಗೆ ಕೀಟನಾಶಕಗಳನ್ನು ಬಳಸಲು ಉಪಯೋಗಿಸುವ ಬಕೀಟ್ ಮತ್ತು ಚಂಬುಗಳನ್ನು ಬಳಕೆಯ ನಂತರ ಸ್ವಚ್ಛವಾಗಿ ನೀರಿನಿಂದ ತೊಳೆಯಬೇಕು. ಅವುಗಳನ್ನು ದನಗಳಿಗೆ ನೀರು ಕುಡಿಯಲು ಬಳಸಬಾರದು. ಕೈಯಿಂದ ಕೀಟನಾಶಕಗಳನ್ನು ಮಿಶ್ರಣ ಮಾಡಬಾರದು. ಹೆಚ್ಚಿನ ಮಾಹಿತಿಗಾಗಿ ಮೊ:98453 64708 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...