More

    ರೈತರಿಂದ ಅಹೋರಾತ್ರಿ ಧರಣಿ

    ಬೆಳಗಾವಿ: ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ಹಾಗೂ
    ಪ್ರವಾಹ ಪೀಡಿತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

    ಧರಣಿಯಲ್ಲಿ ಪಾಲ್ಗೊಂಡಿರುವ ರಾಮದುರ್ಗ, ಗೋಕಾಕ, ಸವದತ್ತಿ ಸೇರಿ ಜಿಲ್ಲೆಯ ವಿವಿಧ ಭಾಗಗಳ ರೈತರು, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಲವು ತಾಲೂಕುಗಳ ನೆರೆ ಸಂತ್ರಸ್ತರಿಗೆ ಸಿಗಬೇಕಾದ ಪರಿಹಾರ ಸಿಕ್ಕಿಲ್ಲ. ಬಹಳಷ್ಟು ಸಂತ್ರಸ್ತರ ಹೆಸರನ್ನು ಕೂಡ ಪಟ್ಟಿಯಿಂದ ಕೈಬಿಡಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡಬೇಕು. ನೊಂದವರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಒತ್ತಾಯಿಸಿದರು.

    ಡಿಸಿ ಭರವಸೆ: ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ಈಗಾಗಲೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತಿದೆ. ಕೆಲವರಿಗೆ ದಾಖಲೆ ಮತ್ತಿತರ ಕಾರಣದಿಂದ ಪರಿಹಾರ ಸಿಕ್ಕಿಲ್ಲ. ಪಟ್ಟಿಯಿಂದ ಕೆಲವು ಸಂತ್ರಸ್ತರನ್ನು ಕೈಬಿಟ್ಟಿರುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡುತ್ತೇನೆ. ಪ್ರತಿ ತಾಲೂಕು ಮಟ್ಟದ ಸಭೆ ನಡೆಸಿ, ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ಅವರು, ಪ್ರತಿಭಟನೆ ವಾಪಸ್ ಪಡೆದುಕೊಳ್ಳಲು ರೈತ ಮುಖಂಡರಿಗೆ ವಿನಂತಿಸಿದರು. ಆದರೆ, ಪ್ರತಿಭಟನಾಕಾರರು ಪರಿಹಾರ ಒದಗಿಸುವವರಿಗೆ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ರೈತ ಮುಖಂಡರಾದ ಭೀಮಶಿ ಗದಾಡಿ, ಕುಮಾರ ತಿಗಡಿ, ಶಂಕರ ಮದ್ದಿಹಳ್ಳಿ, ಮಾಲತೇಶ ಪೂಜಾರಿ, ಮಲ್ಲಿಕಾರ್ಜುನ ರಾಮದುರ್ಗ, ರವಿ ಸಿದ್ದಣ್ಣಮ್ಮಣ್ಣವರ, ರಾಜು ಮರವೆ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts