17 C
Bangalore
Wednesday, December 11, 2019

ರೈತರ ಬಂಧನ ವಾರಂಟ್‌ಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

Latest News

ಕ್ರಿಮ್್ಸ ನಿರ್ದೇಶಕ ಹುದ್ದೆಗಾಗಿ ಹುಬ್ಬಳ್ಳಿಯ ಇಬ್ಬರು ಹಿರಿಯ ವೈದ್ಯರ ಪೈಪೋಟಿ

ವಿಜಯವಾಣಿ ಸುದ್ದಿಜಾಲ ಕಾರವಾರ: ಇಲ್ಲಿನ ಸರ್ಕಾರಿ ಮೆಡಿಕಲ್ ಕಾಲೇಜ್(ಕ್ರಿಮ್್ಸ) ನಿರ್ದೇಶಕ ಹುದ್ದೆಗಾಗಿ ಹುಬ್ಬಳ್ಳಿಯ ಕಿಮ್ಸ್​ನ ಇಬ್ಬರು ಹಿರಿಯ ವೈದ್ಯರ ನಡುವೆ ಪೈಪೋಟಿ ಇದೆ....

ವಾರಕ್ಕೊಮ್ಮೆ ಬ್ಯಾಗ್​ಲೆಸ್ ಡೇ ಯೋಜನೆ; ಶಿಕ್ಷಣ ಸಚಿವ ಸುರೇಶಕುಮಾರ

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ: ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ, ಉತ್ಸಾಹ ಹೆಚ್ಚಿಸಲು ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಮುಂಬರುವ ಶೈಕ್ಷಣಿಕ ವರ್ಷದಿಂದ...

ಬುಡಮೇಲಾದ ಸಿದ್ದು ಭವಿಷ್ಯ

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ನುಡಿದಿದ್ದ ಭವಿಷ್ಯವೆಲ್ಲ ಬುಡಮೇಲಾಗಿದೆ. ಅವರು ತಮ್ಮ ಜ್ಯೋತಿಷಾಲಯ ಮುಚ್ಚಿಕೊಂಡು ಹೋಗಿದ್ದಾರೆ. ಬುರುಡೆ ಬಿಡೋದೆ ಅವರ ಕೆಲಸ. ಬುರುಡೆ...

ಪಿಬಿ ರಸ್ತೆಯಲ್ಲಿ ಟಯರ್ ಅಂಗಡಿ!

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸಿಆರ್​ಎಫ್ ಅನುದಾನದಡಿ ನಿರ್ವಿುಸಲಾದ ಚನ್ನಮ್ಮ ವೃತ್ತ- ಬಂಕಾಪುರ ಚೌಕ ವೃತ್ತದ ಪಿಬಿ ರಸ್ತೆ ಈಗ ಅತಿಕ್ರಮಣಕಾರರ ಸ್ವರ್ಗವಾಗಿ ಮಾರ್ಪಟ್ಟಿದೆ....

ಹಳ್ಳಿಗರಿಗೆ ಅಶುದ್ಧ ನೀರೇ ಗತಿ!

ವೀರೇಶ ಹಾರೋಗೇರಿ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ವಿುಸಿದ ಶುದ್ಧ ನೀರಿನ ಘಟಕಗಳು ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿವೆ. ಇದರಿಂದಾಗಿ...

ಬೆಳಗಾವಿ: ಬೆಳೆಸಾಲ ಸೇರಿ ಕೃಷಿ ಚಟುವಟಿಕೆಗಳಿಗಾಗಿ ಪಡೆದ ಕೃಷಿ ಸಾಲ ಮರುಪಾವತಿ ಮಾಡುವಂತೆ ಬೈಲಹೊಂಗಲ ತಾಲೂಕಿನ ರೈತರಿಗೆ ಕೋಲ್ಕತ ಕೋರ್ಟ್ ಹೊರಡಿಸಿದ್ದ ಬಂಧನ ವಾರಂಟ್‌ಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಮಂಗಳವಾರ ಬೈಲಹೊಂಗಲದಲ್ಲಿ ಎಕ್ಸಿಸ್ ಬ್ಯಾಂಕ್ ಆಯೋಜಿಸಿದ್ದ ಓಟಿಎಸ್ ಸಭೆಯಲ್ಲಿ ಸವದತ್ತಿ ತಾಲೂಕಿನ ಬಡ್ಲಿ ಗ್ರಾಮದ ಅಶೋಕ ಖನಗಾಂವಿ ಎಂಬ ರೈತ ಸುಪ್ರೀಂಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವ ವಿಷಯ ಬೆಳಕಿಗೆ ಬಂದಿದೆ.

ರೈತ ಅಶೋಕ, ಮಕ್ಕಳು, ಪತ್ನಿ, ಹಿರಿಯ ಸಹೋದರ ಹಾಗೂ ಚಿಕ್ಕಪ್ಪನ ಇಬ್ಬರು ಮಕ್ಕಳು ಸೇರಿ ಒಟ್ಟು ಎಂಟು ಜನರಿಗೆ ಕೋಲ್ಕತ ನ್ಯಾಯಾಲದಿಂದ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ರೈತರು ಜು. 25ರಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ್ದ ಕೋರ್ಟ್ 2018ರ ಆಗಸ್ಟ್ 7ರಂದು ಕೋಲ್ಕತ ನ್ಯಾಯಲಯದ ಬಂಧನ ವಾರಂಟ್‌ಗೆ ತಡೆಯಾಜ್ಞೆ ನೀಡಿದೆ.

ಈ ಆದೇಶ ಪಡೆದ ರೈತ ಇಲ್ಲಿಯವರೆಗೆ ಯಾರಿಗೂ ತಿಳಿಸಿರಲಿಲ್ಲ. ಆದರೆ ಬೈಲಹೊಂಗದಲ್ಲಿ ನಡೆದ ಎಕ್ಸಿಸ್ ಬ್ಯಾಂಕ್ ಅಧಿಕಾರಿಗಳ ಒಟಿಎಸ್ ಸಭೆಯಲ್ಲಿ ಸಾಲ ಪಡೆದಿರುವ ದಾಖಲೆಗಳೊಂದಿಗೆ ಕೋರ್ಟ್ ತಡೆಯಾಜ್ಞೆ ಆದೇಶ ಪ್ರತಿಯನ್ನು ಹಾಜರುಪಡಿಸಿದ್ದಾನೆ.

ಪ್ರಕರಣದ ಹಿನ್ನೆಲೆ

2005ರಲ್ಲಿ ಎಕ್ಸಿಸ್ ಬ್ಯಾಂಕ್‌ನಲ್ಲಿ ಬೆಳೆ ಸಾಲ ಹಾಗೂ ಕೃಷಿ ಅಭಿವೃದ್ಧಿಗಾಗಿ ಪೈಪ್‌ಲೈನ್ ಮಾಡಲು ರೈತ 5 ಲಕ್ಷ ರೂ. ಸಾಲ ಪಡೆದಿದ್ದ. ಬಳಿಕ ಅಂದಿನ ಸಿಎಂ ಕುಮಾರಸ್ವಾಮಿ ಅಧಿಕಾರದ ಅವಧಿಯಲ್ಲಿ ಕೆಲ ಸಾಲಮನ್ನಾ ಘೋಷಣೆ ಆಗಿತ್ತು. ಉಳಿದ ಸಾಲಕ್ಕೆ 2016ರ ವರೆಗೆ ಬಡ್ಡಿ ಪಾವತಿ ಮಾಡುತ್ತಾ ಬರಲಾಗಿತ್ತು. ನಂತರ ಸತತ ಬರದಿಂದ ಬೆಳೆಗಳು ನಾಶವಾಗಿದ್ದರಿಂದ ಬೆಳೆಸಾಲದ ಅಸಲು ಮತ್ತು ಬಡ್ಡಿ ಪಾವತಿಸಲು ಆಗಿರಲಿಲ್ಲ. ನಂತರ ಬ್ಯಾಂಕ್ ಅಧಿಕಾರಿಗಳು ನಿಮ್ಮ ಸಾಲ ನವೀಕರಣ ಮಾಡಿಕೊಂಡಲ್ಲಿ 14 ಲಕ್ಷ ರೂ. ಸಾಲ ನೀಡುವುದಾಗಿ ಹೇಳಿದ್ದರಿಂದ ಹೊಸ ಸಾಲ ಪಡೆದುಕೊಂಡಿದ್ದರು. ಇದೀಗ 30 ಲಕ್ಷ ರೂ.ಸಾಲ ಆಗಿದೆ. 2018ರ ಮೇನಲ್ಲಿ 30 ಲಕ್ಷ ರೂ. ಮರುಪಾವತಿ ಮಾಡುವಂತೆ ಕೋಲ್ಕತ ನ್ಯಾಯಾಲದಲ್ಲಿ ಬ್ಯಾಂಕ್ ಪ್ರಕರಣ ದಾಖಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಬಂಧನ ವಾರಂಟ್ ನೀಡಿತ್ತು. ಇದನ್ನು ಪ್ರಶ್ನೀಸಿ ಸುಪ್ರೀಂಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಬ್ಯಾಂಕ್ ಸ್ಪಷ್ಟನೆ: ಎಕ್ಸಿಸ್ ಬ್ಯಾಂಕ್‌ನಿಂದ ತೊಂದರೆಗೀಡಾದ ರೈತರ ಜತೆ ವಿಸ್ತ್ರತವಾದ ಚರ್ಚೆ ನಡೆಸಿದ್ದು, ರೈತರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಏಕ ಕಂತಿನ ಸುಲಭ ವಿಲೇವಾರಿ ವೇಳಾಪಟ್ಟಿಯನ್ನು ಅವರಿಗೆ ನೀಡಲಾಗಿದೆ. ರೈತರು ಈ ಅವಕಾಶದ ಲಾಭ ಪಡೆಯಲು ನಾವು ಮತ್ತೊಮ್ಮೆ ರೈತರನ್ನು ಪ್ರೇರೇಪಿಸುತ್ತಿದ್ದೇವೆ. ರೈತರಿಗೆ ಯಾವುದೇ ಹೊಸ ನೋಟಿಸ್‌ಗಳನ್ನು ನೀಡಿಲ್ಲ ಮತ್ತು ಪ್ರಸ್ತುತ ಇರುವ ಪ್ರಕರಣಗಳನ್ನು ಕರ್ನಾಟಕದ ನ್ಯಾಯಾಲಯಗಳಿಗೆ ವರ್ಗಾಯಿಸುವ ಪ್ರಯತ್ನ ಮುಂದುವರಿದಿದೆ ಎಂದು ಎಕ್ಸಿಸ್ ಬ್ಯಾಂಕ್ ತಿಳಿಸಿದೆ.

Stay connected

278,739FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...