More

    23ರಂದು ರಾಯಚೂರಿನಲ್ಲಿ ರೈತ ದಿನಾಚರಣೆ ಕಾರ್ಯಕ್ರಮ

    ಮದ್ದೂರು: ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಹಾಗೂ ಚೌಧರಿ ಚರಣ್ಸಿಂಗ್ ಅವರ ಹುಟ್ಟುಹಬ್ಬ ಅಂಗವಾಗಿ ಡಿ.23ರಂದು ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ರೈತ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯಿಂದ ರೈತ ಸಂಘದ ಕಾರ್ಯಕರ್ತರು, ನೂರಾರು ಮುಖಂಡರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಖಜಾಂಚಿ ಶೆಟ್ಟಹಳ್ಳಿ ರವಿಕುಮಾರ್ ಹೇಳಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪುಟ್ಟಣ್ಣಯ್ಯ ಹಾಗೂ ಚೌಧರಿ ಚರಣ್ ಸಿಂಗ್ ಅವರ ಜೀವನದ ಯಶೋಗಾಥೆಯನ್ನು ಆಧಾರವಾಗಿಟು ್ಟಕೊಂಡು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

    ರೈತ ಸಂಘದ ಹಿರಿಯ ಮುಖಂಡ ಲಿಂಗಾಪ್ಪಾಜಿ ಮಾತನಾಡಿ, ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಹಾಗೂ ದೀರ್ಘಾವಧಿ ಸಾಲವನ್ನು ನೀಡುವಂತೆ ಆಗ್ರಹಿಸಿ ಡಿ.29 ರಂದು ಬೃಹತ್ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.

    ರೈತ ಸಂಘದ ಯುವ ಮುಖಂಡ ಗೊಲ್ಲರದೊಡ್ಡಿ ಅಶೋಕ್ ಮಾತನಾಡಿ, ರಾಜ್ಯ ಮಟ್ಟದ ರೈತರ ದಿನಾಚರಣೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಮಾಜವಾದಿ ಚಿಂತಕ ಬಿ.ಆರ್.ಪಾಟೀಲ್, ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ರಾಜ್ಯ ಕಾರ್ಯದರ್ಶಿ ರವಿಕಿರಣ್, ಪ್ರಭಾಕರ್ ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮಾವಳ್ಳಿ ಶಂಕರ್, ಪ್ರಸನ್ನ ಗೌಡ, ಜೆ.ಎಂ.ವೀರಸಂಗಯ್ಯ, ನಾಗರತ್ನಮ್ಮ, ಪಾಟೀಲ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ರೈತ ಸಂಘದ ತಾಲೂಕು ಗೂಳೂರುದೊಡ್ಡಿ ರಾಮಕೃಷ್ಣ ತಿಳಿಸಿದರು.

    ಸಭೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಗೂಳೂರದೊಡ್ಡಿ ರಾಮಕೃಷ್ಣ, ಕಾರ್ಯದರ್ಶಿ ವಿನೋದ್‌ಕುಮಾರ್, ಮುಖಂಡರಾದ ಗೊಲ್ಲರದೊಡ್ಡಿ ಅಶೋಕ, ಜಿ.ಎ.ಶಂಕರ, ಲಿಂಗಪ್ಪಾಜಿ, ವರದರಾಜು, ಪುಟ್ಟಸ್ವಾಮಿ, ಸಿದ್ದೇಗೌಡ, ಕೂಳಗೆರೆ ವೆಂಕಟೇಶ, ಸಾವಿತ್ರಮ್ಮ, ಸತ್ಯಭಾಮ, ರಮ್ಯಾ, ಚಿಕ್ಕತಾಯಮ್ಮ, ವೆಂಕಟೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts