More

    ರೈತರಿಂದ ದೆಹಲಿ ಚಲೋ; ಪತ್ರಕರ್ತನ ಮೇಲೆ ಗುಂಡು ಹಾರಿಸಿದ ಪೊಲೀಸರು

    ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ಹಂತ ತಲುಪಿದ್ದು, ಪತ್ರಕರ್ತನೋರ್ವನ ಮೇಲೆ ಗುಂಡು ಹಾರಿಸಲಾಗಿದೆ.

    ಪಂಜಾಬ್​-ಹರಿಯಾಣದ ಶಂಭು ಗಡಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹಾರಿಸಿದ ಗುಂಡು ಆಜ್​ತಕ್ ಸುದ್ದಿ ಸಂಸ್ಥೆಯ ರಿಪೋರ್ಟರ್​ ಸತ್ಯೇಂದ್ರ ಚೌಹಾಣ್​ಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ಮೂಲಗಳ ಪ್ರಕಾರ ಅದು ರಬ್ಬರ್​ ಬುಲೆಟ್​ ಎಂದು ತಿಳಿದು ಬಂದಿದ್ದು, ಗಾಯಾಳುವಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಉಗ್ರರೂಪ ತಾಳಿದ್ದು ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನಲೆ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆಯನ್ನು ವಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts