More

    ರೈತರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್

    ಚಿಕ್ಕೋಡಿ: ಕೇಂದ್ರದ ಕೃಷಿ ಮಸೂದೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ರೈತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ. ಕಾಯ್ದೆ ಬಗ್ಗೆ ತಿಳಿಯಬೇಕು ಎಂದು ಎಂದು ರಾಜ್ಯ ಕೃಷಿ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಸೋಮವಾರ ಪಟ್ಟಣದ ಜಯಪ್ರಕಾಶ ನಾರಾಯಣ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್‌ನವರು ಮುಗ್ಧ ರೈತರನ್ನು ಕೃಷಿ ಮಸೂದೆ ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನೂತನ ಕಾಯ್ದೆಯಿಂದ ಅನ್ನದಾತರಿಗೆ ತಮ್ಮ ಕೃಷಿ ಉತ್ಪನ್ನಗಳನ್ನು ಯಾವುದೇ ಮಾರುಕಟ್ಟೆಯಲ್ಲಿ ಮಾರಲು ಅವಕಾಶವಿದೆ. ರೈತರು ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು. ಶಾಸಕ ಡಿ.ಎಂ.ಐಹೊಳೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತ್ಯಪ್ಪ ನಾಯಿಕ, ಪ್ರಧಾನ ಕಾರ್ಯದರ್ಶಿ ಯೋಗೇಶಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಸತೀಶ ಅಪ್ಪಾಜಿಗೋಳ, ಅಪ್ಪಾಸಾಹೇಬ ಚೌಗಲಾ ಇದ್ದರು.

    ಡಿ.ಕೆ.ಸಹೋದರರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರೀತವಲ್ಲ. ಅದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಿಬಿಐ, ಎಸಿಬಿಯಂತಹ ಸಂಸ್ಥೆಗಳು ಸುಮಾರು ಮೂರ‌್ನಾಲ್ಕು ತಿಂಗಳ ಮೊದಲೇ ಅಗತ್ಯ ತಯಾರಿ ಮಾಡಿಕೊಂಡು ದಾಳಿ ನಡೆಸುತ್ತವೆ. ಕಾಂಗ್ರೆಸ್‌ನವರು ದಾಳಿ ಕುರಿತು ಸುಮ್ಮನೆ ಬಿಜೆಪಿಯವರ ಮೇಲೆ ಆರೋಪ ಮಾಡುತ್ತಿದ್ದಾರೆ.
    |ಈರಣ್ಣ ಕಡಾಡಿ ರಾಜ್ಯಸಭಾ ಸದಸ್ಯ

    ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ರಾಜಸ್ವ ಸಂಗ್ರಹದಲ್ಲಿ ಹಿನ್ನಡೆಯಾಗಿರುವುದು ನಿಜ. ಕಳೆದ ವರ್ಷ ಪ್ರವಾಹದಿಂದ ಬಿದ್ದಿರುವ ಮನೆಗಳಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ಹಣಕಾಸಿನ ಸಮಸ್ಯೆಯಿಲ್ಲ. ತಾಂತ್ರಿಕ ಕಾರಣದಿಂದ ತಡವಾಗಿದೆ. ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು.
    | ಉಮೇಶ ಕತ್ತಿ ಮಾಜಿ ಸಚಿವರು ಹಾಗೂ ಶಾಸಕರು ಹುಕ್ಕೇರಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts