ದೆಹಲಿಯ ರೈತ ಹೋರಾಟಕ್ಕೆ ಧಾರವಾಡದಲ್ಲಿ ಬೆಂಬಲ

ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ವಿವಿಧೆಡೆಯ ರೈತರು ದೆಹಲಿಯಲ್ಲಿ ಬೃಹತ್ ರ‍್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.

ರೈತ ಜಾಗೃತಿ ವೇದಿಕೆ ನೇತೃತ್ವದಲ್ಲಿ ರೈತರಿಂದ ಬೃಹತ್ ಹೋರಾಟ ಜಾಥಾ ನಡೆಸಿ ಮರುಘಾಮಠದಿಂದ ಚಕ್ಕಡಿ ಸಮೇತ ರೈತರು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು.

ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ, ಸಿಪಿಐ, ರೈತಪರ ಸಂಘಟನೆಗಳ ಪದಾಧಿಕಾರಿಗಳು ಭಾಗಿಯಾಗಿದ್ದರು. ಮಾಜಿ ಸಚಿವ ವಿನಯ ಕುಲಕರ್ಣಿ, ಶ್ರೀನಿವಾಸ ಮಾನೆ, ಎನ್.ಎಚ್. ಕೋನರಡ್ಡಿ, ಜಿ.ಎನ್. ದೇವಿ, ಗುರುರಾಜ ಹುಣಸೀಮರದ, ಸಿದ್ದನಗೌಡ ಪಾಟೀಲ್, ಇತರರು ಪಾಲ್ಗೊಂಡಿದ್ದರು. (ದಿಗ್ವಿಜಯ ನ್ಯೂಸ್)