More

    ರೈತರ ಹೋರಾಟ ಬೆಂಬಲಿಸಿ

    ಬೆಳಗಾವಿ: ಭಾರತರತ್ನ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಸೇರಿ ಸೆಲೆಬ್ರಿಟಿಗಳಿಗೆ ಒತ್ತಡ ಹಾಕುವ ಮೂಲಕ ಕೇಂದ್ರ ಸರ್ಕಾರದ ರೈತ ಹೋರಾಟ ವಿರೋಧಿ ನೀತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಸಮರ್ಥಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ದೇಶ, ರೈತರಿಗಿಂತ ಪ್ರಶಸ್ತಿ ದೊಡ್ಡದಲ್ಲ. ಹಾಗಾಗಿ ಪ್ರಶಸ್ತಿಗಳನ್ನು ಹಿಂದಿರುಗಿಸಿಯಾದರೂ ರೈತರ ಹೋರಾಟ ಬೆಂಬಲಿಸಬೇಕು ಎಂದು ಆಗ್ರಹಿಸಿದರು.

    ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹೋರಾಟ ಕಾಂಗ್ರೆಸ್ ಪ್ರಾಯೋಜಿತ ಹೋರಾಟ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಏನಾದರೊಂದು ನೆಪ ಬೇಕು. ನಮಗೂ ರೈತರ ಹೋರಾಟಕ್ಕೂ ಸಂಬಂಧ ಇಲ್ಲ. ನಾವು ಬೆಂಬಲ ನೀಡಿದ್ದೇವೆ ಅಷ್ಟೇ ಎಂದರು.

    ಬೇರೆ ದೇಶಗಳಲ್ಲಿ ಅನ್ಯಾಯವಾದಾಗ ಭಾರತೀಯರು ಕೂಡ ಧ್ವನಿ ಎತ್ತಿದ್ದೇವೆ. ಶ್ರೀಲಂಕಾದಲ್ಲಿ ಅನ್ಯಾಯವಾದಾಗ ನಮ್ಮ ಸೈನಿಕರು ಹೋಗಿದ್ದರು. ಬಾಂಗ್ಲಾದೇಶ ಪ್ರತ್ಯೇಕಿಸುವಲ್ಲಿಯೂ ನಮ್ಮ ದೇಶದ ಪಾತ್ರವಿದೆ. ಡೋನಾಲ್ಡ್ ಟ್ರಂಪ್ ಪರವಾಗಿ ಅಮೆರಿಕೆಗೆ ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರ ಮಾಡಿದ್ದು, ಆ ದೇಶದ ಪ್ರಜಾಪ್ರಭುತ್ವದಲ್ಲಿ ಭಾಗಿಯಾದಂತೆಯೇ ಅಲ್ಲವೇ ಎಂದು ಪ್ರಶ್ನಿಸಿದ ಅವರು, ಇದೀಗ ಅನ್ನದಾತರ ಪರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಗು ಕೇಳಿಬರುತ್ತಿದ್ದು, ದೇಶದ ಅಂತರಿಕ ವಿಷಯ ಎಂದು ಸಮರ್ಥಿಸಿಕೊಳ್ಳುವುದಾದರೂ ಹೇಗೆ ಎಂದು ಕಿಡಿಕಾರಿದರು.

    ಇನ್ನು ಕುರುಬ ಸಮುದಾಯದ ಮೀಸಲಾತಿ ಹೋರಾಟವನ್ನು ಸಚಿವ ಕೆ.ಎಸ್.ಈಶ್ವರಪ್ಪನವರೇ ನೇತೃತ್ವ ವಹಿಸಿಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಹೆಚ್ಚು ಉತ್ತರಿಸುವುದಿಲ್ಲ, ಯಾರ‌್ಯಾರಿಗೆ ನ್ಯಾಯಸಮ್ಮತ ಮೀಸಲಾತಿ ಸಿಗಬೇಕೋ ಅವರಿಗೆ ನೀಡಲೇಬೇಕು ಎಂದು ಪಂಚಮಸಾಲಿ, ಕುರುಬ ಸಮುದಾಯದ ಮೀಸಲಾತಿ ಹೋರಾಟದ ಕುರಿತು ಅಭಿಪ್ರಾಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ ಹನುಮಣ್ಣವರ ಇತರರು ಇದ್ದರು.

    ಬೆಳಗಾವಿ ಲೋಕಸಭೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷದ ನಿರ್ಧಾರ ಪ್ರಕಟಿಸಲಾಗುವುದು. ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರೀತಿ ಸಿದ್ಧತೆ ಮಾಡಿಕೊಂಡಿದ್ದು, ವಿಧಾನಸಭಾ ಕ್ಷೇತ್ರವಾರು ಭೇಟಿ ನೀಡುತ್ತಿದ್ದೇವೆ. ಬಿಜೆಪಿಯವರಂತೆ ವಾಟ್ಸ್‌ಆ್ಯಪ್ ಹಾಗೂ ಫೇಸ್‌ಬುಕ್‌ನಲ್ಲಿಯಷ್ಟೇ ಪ್ರಚಾರ ಮಾಡುವುದಿಲ್ಲ.
    | ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts