18 C
Bangalore
Friday, December 6, 2019

ರೈತಸ್ನೇಹಿ ‘ಬೆಳೆ ದರ್ಶಕ’ ಆ್ಯಪ್ ಬಿಡುಗಡೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಉಡುಪಿ: ರಾಜ್ಯದಲ್ಲಿ ಮುಂಗಾರು ಬೆಳೆಯ ಸಮೀಕ್ಷೆ ಕಾರ್ಯ ಪ್ರಾರಂಭವಾಗಿದ್ದು, ಇದರ ಸಂಪೂರ್ಣ ಮಾಹಿತಿ ರೈತರಿಗೆ ನೀಡುವ ಉದ್ದೇಶದಿಂದ ಸರ್ಕಾರ ‘ಬೆಳೆ ದರ್ಶಕ’ ರೈತ ಸ್ನೇಹಿ ಆ್ಯಪ್ ಬಿಡುಗಡೆ ಮಾಡಿದೆ.

ಆಯಾ ಪ್ರದೇಶದಲ್ಲಿ ಬೆಳೆ ಸರ್ವೇಗೆ ನಿಯೋಜಿಸಲಾದ ಸಿಬ್ಬಂದಿ ವಿವರ ಆ್ಯಪ್‌ನಲ್ಲಿ ಲಭ್ಯವಿದೆ. ಸಮೀಕ್ಷೆ ಮಾಡುವವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಜಮೀನಿನಲ್ಲಿ ಯಾವಾಗ ಬೆಳೆ ಸರ್ವೇ ನಡೆಯುತ್ತದೆ ಎಂಬುದನ್ನು ಈ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿದೆ. ಇದರಿಂದ ಅನಧಿಕೃತ ವ್ಯಕ್ತಿಗಳು ಬೆಳೆ ಸರ್ವೇ ನೆಪದಲ್ಲಿ ರೈತರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಬ್ರೇಕ್ ಬೀಳಲಿದೆ.

ಬೆಳೆಗಳ ಪಕ್ಕಾ ಮಾಹಿತಿ: ಸರ್ವೇ ಕಾರ್ಯ ಮುಗಿದಿದ್ದರೆ ಈ ಆ್ಯಪ್ ಮೂಲಕ ರೈತರು ದತ್ತಾಂಶ ಸಂಗ್ರಾಹಕರು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಸರಿಯಾದ ಮಾಹಿತಿಗಳನ್ನೂ ನೀಡಿದ್ದಾರೆಯೇ ಇಲ್ಲವೇ ಎಂಬುದನ್ನು ಸ್ವತಃ ಪರಿಶೀಲಿಸಿಕೊಳ್ಳಬಹುದು. ಆರ್‌ಟಿಸಿ ಸಂಖ್ಯೆ, ಬೆಳೆಗಳ ವಿವರ, ಭಾವಚಿತ್ರ ಇತ್ಯಾದಿ ವಿವರಗಳು ತಪ್ಪಾಗಿ ನಮೂದಾಗಿದ್ದರೆ ಆ್ಯಪ್ ಆಧಾರದಲ್ಲಿಯೇ ತಹಸೀಲ್ದಾರ್‌ಗೆ ದೂರು ಸಲ್ಲಿಸಲು ಅವಕಾಶವಿದೆ. ಜತೆಗೆ ಆ್ಯಪ್‌ನಲ್ಲಿ ದಾಖಲಾದ ಮಾಹಿತಿ ಆಧಾರದಲ್ಲಿ ಬೆಳೆಹಾನಿ ಸಂದರ್ಭ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ತಮ್ಮ ಬೆಳೆಗಳ ಪಕ್ಕಾ ಮಾಹಿತಿ ಲಭ್ಯವಾಗುತ್ತದೆ. ಇದರಿಂದ ರೈತರಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ ಬಳಿಕ ಪರಿಹಾರ ಪಡೆಯುವಾಗ ಆಗುತ್ತಿದ್ದ ವಿಳಂಬ ತಪ್ಪಲಿದೆ.

ಅಧಿಕಾರಿಗಳಿಗೂ ಅನುಕೂಲ: ನೂತನ ಆ್ಯಪ್ ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳಿಗೂ ಅನುಕೂಲವಾಗಿದ್ದು, ಬೆಳೆ ಸಮೀಕ್ಷೆಗೆ ತೆರಳಿದ ಸಿಬ್ಬಂದಿ ನಿಗದಿತ ಕೆಲಸಗಳಲ್ಲಿ ಎಷ್ಟನ್ನು ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರೀಕ್ಷಿಸಬಹುದು. ಜತೆಗೆ ಜಮೀನಿಗೆ ತೆರಳಿದ್ದಾರೆಯೇ ಅಥವಾ ಕಚೇರಿಯಲ್ಲಿ ಇದ್ದಾರೆಯೇ ಎಂಬುದನ್ನು ಪತ್ತೆ ಹಚ್ಚಬಹುದಾಗಿದೆ.

ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯ: ರೈತರು ತಮ್ಮ ಮೊಬೈಲ್‌ನ ಗೂಗಲ್ ಪ್ಲೇ ಸ್ಟೋರ್ ಮೂಲಕ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು. Bele Darshak ಎಂದು ಟೈಪ್ ಮಾಡಿದರೆ ಆ್ಯಪ್ ಲಭ್ಯವಾಗುತ್ತದೆ. ಈಗಾಗಲೇ ಸಹಸ್ರಾರು ರೈತರು ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಬೆಳೆ ಸಮೀಕ್ಷೆ ಕಾರ್ಯ ಉತ್ತಮ ರೀತಿಯಲ್ಲಿ ನಡೆಸಲು ಸರ್ಕಾರ 2ನೇ ಆ್ಯಪ್ ಬಿಡುಗಡೆ ಮಾಡಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ನಿಖರ ಮಾಹಿತಿ, ಭಾವಚಿತ್ರ ಸಂಗ್ರಹಿಸಿಡಲು ಸಾಧ್ಯವಾಗುತ್ತದೆ.
|ಪ್ರದೀಪ್ ಕುರ್ಡೇಕರ್, ತಹಸೀಲ್ದಾರ್, ಉಡುಪಿ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...