ರೈತರ ಜಮೀನು ಕಬಳಿಕೆ ಅತ್ಯಂತ ದುರದೃಷ್ಟಕರ: ಬಿ.ಸಿ. ಪಾಟೀಲ

blank

ಹಿರೇಕೆರೂರ: ವಕ್ಪ್ ಇಲಾಖೆಯಿಂದ ಕ್ಷೇತ್ರದ ರೈತರ ಭೂಮಿ ಕಬಳಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ರಟ್ಟಿಹಳ್ಳಿ, ಹಿರೇಕೆರೂರ ತಾಲೂಕು ಬಿಜೆಪಿ ಘಟಕದ ವತಿಯಿಂದ ಸೋಮವಾರ ಪಟ್ಟಣದ ಸರ್ವಜ್ಞ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಈ ಕ್ಷೇತ್ರದಲ್ಲಿ 183 ರೈತರ ಜಮೀನಿನ ಪಹಣಿಯಲ್ಲಿ ವಕ್ಛ್ ಆಸ್ತಿ ಎಂದು ನಮೂದಾಗಿದೆ. ರಾಜ್ಯಾದ್ಯಂತ ವಕ್ಛ್ ಕಾನೂನಿಂದಾಗಿ ರೈತರ ಜಮೀನುಗಳನ್ನು ಕಬಳಿಸುತ್ತಿರುವುದು ದುರದೃಷ್ಟಕರ ಸಂಗತಿ. ಅಮಾಯಕ ರೈತರ ಜಮೀನುಗಳನ್ನು ಹೀಗೆ ಕಬಳಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಪ್ ಸಚಿವ ಜಮೀರ ಅಹ್ಮದ್ ಹಾಗೂ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ. ಇಂತಹ ರೈತ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ. ಒದು ವೇಳೆ ಇದು ನಿಲ್ಲದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಹೊರಾಟ ಉಗ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.

ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಶಿವು ತಿಪ್ಪಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ಟಿಎಪಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ಜಿಪಂ ಮಾಜಿ ಸದಸ್ಯ ಎನ್.ಎಂ. ಈಟೇರ ಹಾಗೂ ಮತ್ತಿತರರು ಮಾತನಾಡಿದರು.

ತಹಸೀಲ್ದಾರ ಎಚ್. ಪ್ರಭಾಕರಗೌಡ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕೆಸಿಸಿ ಬ್ಯಾಂಕ್ ನಿರ್ದೇಶಕ ರವಿಶಂಕರ ಬಾಳಿಕಾಯಿ, ಪಪಂ ಸದಸ್ಯರಾದ ಹರೀಶ ಕಲಾಲ್, ರಮೇಶ ತೋರಣಗಟ್ಟಿ, ಹನುಮಂತ ಕುರಬರ, ಗುರುಶಾಂತ ಯತ್ತಿನಹಳ್ಳಿ, ತಾಲೂಕು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮನೋಹರ ವಡ್ಡಿನಕಟ್ಟಿ, ಪರಮೇಶಪ್ಪ ಹಲಗೇರಿ, ಜಗದೀಶ ದೊಡ್ಡಗೌಡ್ರ, ಮಹೇಶ ಭರಮಗೌಡ್ರ, ಮಂಜುಳಾ ಬಾಳಿಕಾಯಿ, ಬಸಮ್ಮ ಅಬಲೂರ, ಗೀತಾ ದಂಡಗೀಹಳ್ಳಿ, ಎನ್.ಎಸ್. ಚಿಕ್ಕನರಗುಂದಮಠ, ಮನೋಜ ಹಾರ್ನಳ್ಳಿ, ಗದಿಗೆಪ್ಪ ತಿಪ್ಪಶೆಟ್ಟಿ, ಪುಟ್ಟಣ್ಣ ಪಾಟೀಲ, ರಾಮು ಮುರಡೇಶ್ವರ ಹಾಗೂ ರೈತರು, ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.

Share This Article

ಮಿತಿ ಮೀರಿ ಮೊಬೈಲ್ ಬಳಸುವುದರಿಂದ ವೃದ್ಧಾಪ್ಯದ ಲಕ್ಷಣ ಚಿಕ್ಕವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತವೆ! ತಜ್ಞರು ಏನು ಹೇಳುತ್ತಾರೆ ಗೊತ್ತಾ?… smartphone

ನವದೆಹಲಿ:  ( smartphone ) ಇತ್ತೀಚಿನ ದಿನಗಳಲ್ಲಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಮೊಬೈಲ್…

ಮೊಬೈಲ್​ ಹಿಡಿದುಕೊಳ್ಳುವ ಸ್ಟೈಲ್​ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts

Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…

ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips

Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…