More

    ಪೊಲೀಸರ ಜೊತೆ ರೈತರ ಘರ್ಷಣೆ; ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಹಲವರ ಬಂಧನ

    ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಗಡಿ ಭಾಗಗಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನ ಕಳೆಯುತ್ತಿದ್ದಂತೆ ಉಗ್ರರೂಪ ತಾಳುತ್ತಿದ್ದು, ಪೊಲೀಸರು ಹಾಗೂ ರೈತರ ನಡುವೆ ಮತ್ತೊಂದು ಸುತ್ತಿನ ಘರ್ಷಣೆ ನಡೆದಿದೆ.

    ಹರಿಯಾಣದ ಹಿಸ್ಸಾರ್​ ಹಾಗೂ ಪಂಜಾಬ್‌ನ ಖಾನೌರಿ ಗಡಿಗಳಲ್ಲಿ ಘರ್ಷಣೆ ಸಂಭವಿಸಿದ್ದು, ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು,ಜಲ ಫಿರಂಗಿಗಳನ್ನು ಬಳಸಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಿದ್ದು ಪೊಲೀಸ್​ ಅಧಿಕಾರಿಗಳು ಹಾಗೂ ರೈತರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಹಲವು ರೈತ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

    ಘರ್ಷಣೆಯ ಸಂದರ್ಭದಲ್ಲಿ ಸಾವಿಗೀಡಾದ ರೈತ ಶುಭಕರಣ್ ಸಿಂಗ್ (22) ಅವರ ಕುಟುಂಬವು ರಾಜ್ಯ ಸರ್ಕಾರ ನೀಡಿದ್ದ 1 ಕೋಟಿ ರೂವನ್ನು ಸ್ವೀಕರಿಸಲು ನಿರಾಕರಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಯುವಕನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ. ದೆಹಲಿ ಚಲೋ ಕರೆಗೆ ಸಂಬಂಧಿಸಿದಂತೆ ಮುಂದಿನ ನಡೆ ಏನಿರಬೇಕು ಎಂಬ ಬಗ್ಗೆ ಗುರುವಾರ (ಫೆ. 29) ತೀರ್ಮಾನ ಕೈಗೊಳ್ಳುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.

    ಇದನ್ನೂ ಓದಿ: ಹೃದಯಾಘಾತಕ್ಕೆ ಕರ್ನಾಟಕ ಮೂಲದ ಉದಯೋನ್ಮುಕ ಕ್ರಿಕೆಟಿಗ ಬಲಿ

    ಯುವ ರೈತನ ಸಾವಿಗೆ ಕಾರಣರಾದವರ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಆ ಯುವಕನಿಗೆ ನ್ಯಾಯ ಸಿಗುವವರೆಗೂ ನಾವು ಶವಸಂಸ್ಕಾರ ಮಾಡುವುದಿಲ್ಲ. ಆತನಿಗೆ ಗುಂಡು ಹಾರಿಸಿದ ಹರಿಯಾಣ ಪೊಲೀಸರು ಮತ್ತು ಅರೆಸೇನಾಪಡೆ ವಿರುದ್ಧ ಸ್ವಯಂ ದೂರು ದಾಖಲಿಸಿಕೊಳ್ಳಬೇಕು ಎಂದು ಪ್ರತಿಭಟನಾ ನಿರತ ರೈತರು ಆಗ್ರಹಿಸಿದ್ದಾರೆ.

    ಏತನ್ಮಧ್ಯೆ, ಖಾನೌರಿ ಗಡಿಯಲ್ಲಿ ಮತ್ತೊಬ್ಬ ಪ್ರತಿಭಟನಾನಿರತ ರೈತ ಮೃತಪಟ್ಟಿದ್ದಾರೆ. ಮೃತರನ್ನು ದರ್ಶನ್​ ಸಿಂಗ್ (62) ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ರೈತರು ತಿಳಿಸಿದ್ದಾರೆ. ಇದರಿಂದ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts