More

    ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

    ಹಲಗೂರು : ಕೃಷಿ ಪಂಪ್‌ಸೆಟ್‌ಗಳಿಗೆ ಪ್ರೀ ಪೇಯ್ಡ್ ಮೀಟರ್ ಅಳವಡಿಸುವ ಮೂಲಕ ಕೇಂದ್ರ ಸರ್ಕಾರ ರೈತಕುಲ ನಾಶಪಡಿಸುವ ಹುನ್ನಾರ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್. ಭರತ್‌ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತಾಲೂಕಿನ ಹಲಗೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಬಲ ಬೆಲೆ ಕಾಯ್ದೆ, ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯುವುದು ಇನ್ನು ಹಲವು ಬೇಡಿಕೆಗಳ ಬಗ್ಗೆ ಭರವಸೆ ನೀಡಿ, ಇದುವರೆಗೂ ಈಡೇರಿಸದೆ ರೈತರಿಗೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು.
    ಹೀಗಾಗಿ ರೈತ, ಕಾರ್ಮಿಕ, ಕೂಲಿಕಾರ, ದಲಿತ, ಮಹಿಳಾ ವಿರೋಧಿ ನೀತಿಗಳ ವಿರುದ್ಧವಾಗಿ ದೇಶಾದ್ಯಂತ 72 ಗಂಟೆಗಳ ಕಾಲ ನ.26 ರಿಂದ 28ರವರೆಗೆ ಎಲ್ಲ ರಾಜಧಾನಿಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜೆಸಿಟಿಯು ಕರೆಯ ಮೇರೆಗೆ ಮಹಾಧರಣಿ ನಡೆಸಲಾಗುತ್ತಿದೆ ಎಂದರು.
    ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಗೊಳಿಸಬೇಕು, ಕರ್ನಾಟಕ ಭೂ ಸುಧಾರಣ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ದಿನಕ್ಕೆ 600 ರೂ. ಕೂಲಿ ಹಾಗೂ ವಾರ್ಷಿಕ 200 ದಿನ ಕೆಲಸ ನಿಗದಿಪಡಿಸುವಂತೆ ಒತ್ತಾಯಿಸಿದರು.
    ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸದಸ್ಯರಾದ ಪ್ರಮೀಳಾ, ಹಲಗೂರು ಹೋಬಳಿ ಅಧ್ಯಕ್ಷ ಮಹದೇವು, ಮಾರಗೌಡನಹಳ್ಳಿ ಸಣ್ಣಶೆಟ್ಟಿ, ಸಾಗ್ಯ ರಾಜು ಇತರರಿದ್ದರು.

    23 ಜ್ಟ1
    ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಮಂಗಳವಾರ ಹಲಗೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಎನ್.ಎಲ್. ಭರತ್‌ರಾಜ್, ಪ್ರಮೀಳಾ, ಮಹದೇವು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts