More

    ವಿದ್ಯುತ್ ಸಮರ್ಪಕ ಪೂರೈಕೆಗೆ ಆಗ್ರಹಿಸಿ ಸೆಸ್ಕ್ ಕಚೇರಿ ಎದುರು ರೈತರ ಪ್ರತಿಭಟನೆ

    ಮೈಸೂರು: ವಿದ್ಯುತ್ ಸಮಪರ್ಕ ಪೂರೈಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದ ಸೆಸ್ಕ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.

    ಜಿಲ್ಲೆಯಲ್ಲಿ ಬರಗಾಲದಿಂದ ರೈತರು ಕಂಗೆಟ್ಟಿದ್ದು, ಬೆಳೆಗಳನ್ನು ಉಳಿಸಿಕೊಳ್ಳಲು ವಿದ್ಯುತ್ ಸಮಪರ್ಕ ಪೂರೈಕೆ ಮಾಡಬೇಕು ಹಾಗೂ ಹೊಸ ವಿದ್ಯುತ್ ಸಂಪರ್ಕ ಪಡೆಯಲು ರೈತರಿಗೆ ಅವಕಾಶ ಮಾಡಿಕೊಡಬೇಕು, ಟಿಸಿ ಸುಟ್ಟು ಹೋದರೆ 72 ಗಂಟೆಯಲ್ಲಿ ಬದಲಾಯಿಸಬೇಕು ಎಂಬ ನಿಯಮ ಇದ್ದರೂ ಸೆಸ್ಕ್ ಕೆಳ ಹಂತದ ಅಧಿಕಾರಿಗಳು ತೀವ್ರ ವಿಳಂಬ ನೀತಿ ತೋರುತ್ತಿರುವ ಹಿನ್ನೆಲೆಯಲ್ಲಿ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ರೈತರ ಜಮೀನುಗಳಲ್ಲಿ ಜೋತು ಬಿದ್ದಿರುವ ತಂತಿಗಳನ್ನು ಸರಿಪಡಿಬೇಕು, ಜಂಗಲ್ ಕಟಿಂಗ್ ಮಾಡಿ ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ರೈತರು ಒತ್ತಾಯಿಸಿದರು.

    ವಿದ್ಯುತ್ ಅವಘಡಗಳಿಂದ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ರೈತರು ಬೆಳೆದಂತಹ ಕಬ್ಬಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ನಷ್ಟಕ್ಕೆ 30 ದಿನದ ಒಳಗೆ ನಷ್ಟ ಪರಿಹಾರ ನೀಡಬೇಕು, ರಾಜ್ಯ ಸರ್ಕಾರ ಚುನಾವಣೆಯ ಪ್ರಣಾಳಿಕೆಯ ಭರವಸೆಯಂತೆ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್‌ಅನ್ನು ಉಚಿತವಾಗಿ ನೀಡಬೇಕು, ಅದನ್ನು ಬಿಟ್ಟು ಷರತ್ತುಗಳನ್ನು ಹಾಕಿ ಸರಾಸರಿಯಂತೆ ವಿದ್ಯುತ್ ನೀಡುತ್ತಿರುವ ನಿಯಮವನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಅಂಕನಹಳ್ಳಿ ತಿಮ್ಮಪ್ಪ, ಕೆರೆಹುಂಡಿ ರಾಜಣ್ಣ, ಹನುಮಯ್ಯ, ಹಾಡ್ಯ ರವಿ, ಹಾಲಿನ ನಾಗರಾಜ್, ಮುದ್ದಹಳ್ಳಿ ಚಿಕ್ಕಸ್ವಾಮಿ, ಅಂಬಳೆ ಮಾದೇವಸ್ವಾಮಿ, ಕೊಂತಯ್ಯನಹುಂಡಿ ಮಹೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts