More

    ಸೆಸ್ಕ್ ಕಚೇರಿ ಮುಂದೆ ರೈತರ ಪ್ರತಿಭಟನೆ

    ಬೈಲಕುಪ್ಪೆ: ರೈತರ ಪಂಪ್‌ಸೆಟ್‌ಗಳಿಗೆ ಸೆಸ್ಕ್ ಅಧಿಕಾರಿಗಳು ಸಮರ್ಪಕ ವಿದ್ಯುತ್ ನೀಡದೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿ ರೈತರು ದೊಡ್ಡ ಹೊನ್ನೂರು ಗೇಟ್ ಸಮೀಪವಿರುವ ಸೆಸ್ಕ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.


    ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ವ್ಯಾಪ್ತಿಯ ರೈತರು ಬೈಲಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ರಘು ನೇತೃತ್ವದಲ್ಲಿ ಆಗಮಿಸಿ ಸೆಸ್ಕ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


    ರೈತರ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್ ಕೊಡುವ ಬದಲು ಕೇವಲ ಮೂರು ಗಂಟೆ ಕೊಡುತ್ತಾರೆ. ಅದನ್ನು ಸರಿಯಾದ ಸಮಯಕ್ಕೆ ಕೊಡುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದರು.


    ಗ್ರಾಮ ಪಂಚಾಯಿತಿ ಸದಸ್ಯ ರಘು ಮಾತನಾಡಿ, ರೈತರಿಗೆ ಸೆಸ್ಕ್ ನಿಗದಿ ಮಾಡಿರುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಸರಬರಾಜು ಮಾಡಬೇಕು, ನಿಮ್ಮ ಇಲಾಖೆ ಪ್ರಕಾರವೇ ನಿಗದಿ ಮಾಡಿರುವ ಅವಧಿಯಲ್ಲಿ ಆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.


    ಕೊಪ್ಪ ಸೆಸ್ಕ್ ಅಧಿಕಾರಿ ಸುನೀಲ್ ಯಾದವ್ ಮಾತನಾಡಿ, ನಿಮ್ಮ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವುದಾಗಿ ಭರವಸೆ ನೀಡಿದರು. ಮುಂದೆ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಬೇಕು, ತಪ್ಪಿದಲ್ಲಿ ಉಗ್ರ ಪ್ರತಿಭಟನೆಗೆ ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿ ಪ್ರತಿಭಟನೆ ವಾಪಸ್ ಪಡೆದರು.


    ಬೈಲಕುಪ್ಪೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಹದೇವ್, ದಿನೇಶ್, ಮಂಚದೇವನಹಳ್ಳಿ ಭರತ್‌ರಾಜ ಅರಸ್, ಮಂಜುನಾಥ್, ಲಕ್ಷ್ಮೀಪುರ ಕೃಷ್ಣ, ಉದಯ್, ರಮೇಶ್, ಚೇತು, ರವಿ, ಕರಡಿಬೊಕ್ಕೆ ಗ್ರಾಮದ ರೈತರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts