ಸವಣೂರಲ್ಲಿ ರೈತರ ಪ್ರತಿಭಟನೆ: ವಿವಿಧ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗ್ರಹ

ಸವಣೂರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ನೇತೃತ್ವದಲ್ಲಿ ಪಟ್ಟಣದ ಕಂದಾಯ ಇಲಾಖೆ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ಕೈಗೊಂಡು ತಹಸೀಲ್ದಾರ್ ಭರತರಾಜ್ ಕೆ.ಎನ್. ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಿರಂತರ ಸುರಿದ ಮಳೆಯಿಂದ ತಾಲೂಕಿನಾದ್ಯಂತ ಹತ್ತಿ, ಮಕ್ಕೆಜೋಳ, ಶೇಂಗಾ, ಸೋಯಾಬೀನ್ ಮಳೆಯಾಧಾರಿತ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಸಂಪೂರ್ಣ ಹಾಳಾಗಿದೆ. ಭೀಕರ ಬರಗಾಲದ ಭೀತಿಯಲ್ಲಿ ರೈತರು ಕಂಗಾಲಾಗಿ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಬೆಳೆಗಳು ಹಾನಿಯಾಗಿದ್ದು ಎನ್​ಡಿಆರ್​ಎಫ್ ನಿಯಮದಂತೆ ಸಮೀಕ್ಷೆ ಕೈಗೊಂಡು ರೈತರ ಖಾತೆಗಳಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು.

ನಾಲ್ಕು ವರ್ಷಗಳಿಂದ ಅತಿವೃಷ್ಟಿ ಸಂಭವಿಸಿ ಬೆಳೆ ಹಾನಿಯಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿ ಮಾಡಿದ ಸಾಲವನ್ನು ಮನ್ನಾ ಮಾಡಬೇಕು. ವರದಾ ನದಿಯಿಂದ ಪಟ್ಟಣದ ಮೋತಿ ತಲಾಬ ಸೇರಿದಂತೆ ವಿವಿಧ ಗ್ರಾಮಗಳ ಕೆರೆಗಳನ್ನು ತುಂಬಿಸಬೇಕು. ಹೆಸ್ಕಾಂ ಮುಖಾಂತರ ರಾಜ್ಯ ಸರ್ಕಾರ ರೈತರ ಬೋರ್​ವೆಲ್​ಗಳಿಗೆ ಆಧಾರ ಜೋಡಣೆ ಮಾಡುತ್ತಿರುವದನ್ನು ನಿಲ್ಲಿಸಿ, ರೈತರ ನೆರವಿಗೆ ಮುಂದಾಗಬೇಕು. ಕೂಡಲೇ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ, ತಾಲೂಕು ಘಟಕ ಅಧ್ಯಕ್ಷ ಚನ್ನಪ್ಪ ಮರಡೂರ, ಪದಾಧಿಕಾರಿಗಳಾದ ನೂರಅಹ್ಮದ ಮುಲ್ಲಾ, ಅಬ್ದುಲ್​ಖಾದರ ಬುಡಂದಿ, ಸಿದ್ದಣ್ಣ ಕೆಲಕೊಂಡ, ಸತೀಶ ದೇವಸೂರ, ಈರಪ್ಪ ಕುಂಬಾರ, ನೀಲನಗೌಡ ಹೊಸಮನಿ, ವಿನಾಯಕ ಉಪ್ಪನಾಳ, ಮಂಜು ಬಾರಕೇರ, ಶೇಖರಗೌಡ ಪಾಟೀಲ, ರಾಜು ಕುಳೇನೂರ, ಮಾಂತೇಶ ಅಂಗಡಿ, ನಾಗಪ್ಪ ಹಡಪದ, ಅಶೋಕ ಆಡೂರ, ಬಸಲಿಂಗಪ್ಪ ನರಗುಂದ ಹಾಗೂ ಇತರರು ಇದ್ದರು.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…