More

    ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

    ಹಾವೇರಿ: ಕೇಂದ್ರ ಸರ್ಕಾರದ ಮೂರು ಕೃಷಿ ವಿಧೇಯಕ ಮತ್ತು ವಿದ್ಯುಚ್ಛಕ್ತಿ ಮಸೂದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

    ಡಿವೈಎಫ್​ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಅವರ ಮೇಲೆ ಹಲ್ಲೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯ. ಕೂಡಲೇ ಪ್ರಧಾನ ಮಂತ್ರಿಗಳು ರೈತರ ಕ್ಷಮೆಯಾಚಿಸಿ ಅನ್ನದಾತರ ಬೇಡಿಕೆ ಈಡೇರಿಸಬೇಕು. ರೈತರು ದೆಹಲಿಗೆ ಬರುವುದನ್ನು ತಡೆಯಲು ರಾಷ್ಟ್ರೀಯ ಹೆದ್ದಾರಿ ಅಗೆದು, ಉಕ್ಕಿನ ಬೇಲಿ ಹಾಕುತ್ತಿದೆ. ಜಲಫಿರಂಗಿಗಳಿಂದ ಕೊರೆಯುವ ಚಳಿಯಲ್ಲಿ ಜಲಪ್ರಹಾರ ನಡೆಸುತ್ತಿದೆ. ಪೊಲೀಸರಿಂದ ಅಶ್ರುವಾಯು ಸಿಡಿಸುತ್ತಿದೆ. ರೈತರಿಗೆ ಈಗ ಸರ್ಕಾರದ ಮೇಲೆ ವಿಶ್ವಾಸವಿಲ್ಲವಾಗಿದ್ದರೆ, ಅದಕ್ಕೆ ರೈತರನ್ನು ದೂರಬೇಕಾಗಿಲ್ಲ. ಕೇಂದ್ರ ಸರ್ಕಾರವೇ ಇದಕ್ಕೆಲ್ಲ ಕಾರಣ ಎಂದು ದೂರಿದರು.

    ವಕೀಲ ನಾರಾಯಣ ಕಾಳೆ ಮಾತನಾಡಿ, ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಬದಿಗೊತ್ತಿ, ಅನ್ನದಾತರ ನ್ಯಾಯಯುತ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ರಾಷ್ಟ್ರವ್ಯಾಪಿ ರೈತರು, ಕಾರ್ವಿುಕರ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಪ್ರತಿಭಟನೆಯಲ್ಲಿ ರೈತ ಸಂಘಟನೆಯ ಜಿಲ್ಲಾ ಮುಖಂಡರಾದ ಮಂಜುಳಾ ಅಕ್ಕಿ , ಎಸ್​ಎಫ್​ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ, ಸಿಐಟಿಯು ಜಿಲ್ಲಾ ಮುಖಂಡ ಅಂದಾನೆಪ್ಪ ಹೆಬಸೂರು, ಸಾಮಾಜಿಕ ಪರಿವರ್ತನಾ ಜನಾಂದೋಲನ ಮುಖ್ಯಸ್ಥೆ ಹಸೀನಾ ಹೆಡಿಯಾಲ, ಹನುಮಕ್ಕ ತುಮರಿ, ಡಿಎಸ್​ಎಸ್ ಮುಖಂಡರಾದ ಉಡಚಪ್ಪ ಮಾಳಗಿ, ಹೊನ್ನೇಶ್ವರ ತಗಡಿನಮನಿ, ಪರಶುರಾಮ ಮರೆಣ್ಣವರ, ಜಯ ಕರ್ನಾಟಕ ಸಂಘಟನೆಯ ಸುಭಾಸ ಬೆಂಗಳೂರು, ರಮೇಶ ಆನವಟ್ಟಿ, ಕೃಷ್ಣಾ ಕಡಕೋಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts