Farmer’s Protest | ಪಂಜಾಬ್‌ ಹೆದ್ದಾರಿಗಳಲ್ಲಿನ ತಡೆ ತೆರವುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ; ಸುಪ್ರೀಂಕೋರ್ಟ್​​ ಹೇಳಿದ್ದೇನು?

blank

ನವದೆಹಲಿ: ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ(Farmer’s Protest) ನಡೆಸುತ್ತಿರುವ ಹೆದ್ದಾರಿಗಳಲ್ಲಿನ ತಡೆಗಳನ್ನು ತೆಗೆದುಹಾಕಲು ಕೇಂದ್ರ ಮತ್ತು ಇತರರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ(ಡಿಸೆಂಬರ್​​ 9) ತಿರಸ್ಕರಿಸಿದೆ. ಈ ಪ್ರಕರಣವು ಈಗಾಗಲೇ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದು, ಇದೇ ವಿಷಯದ ಕುರಿತು ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನು ಓದಿ: Syria Crisis | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ಅಸ್ಸಾದ್; ಈ ಬಗ್ಗೆ ರಷ್ಯಾ ಹೇಳಿದಿಷ್ಟು..

ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಪಂಜಾಬ್‌ನಲ್ಲಿ ಸಾಮಾಜಿಕ ಕಾರ್ಯಕರ್ತನಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡ ಅರ್ಜಿದಾರ ಗೌರವ್ ಲೂತ್ರಾ ಅವರಿಗೆ ‘ನಾವು ಈಗಾಗಲೇ ವಿಶಾಲವಾದ ಸಮಸ್ಯೆಯನ್ನು ಪರಿಗಣಿಸುತ್ತಿದ್ದೇವೆ. ನಿಮಗೆ ಮಾತ್ರ ಸಮಾಜದ ಬಗ್ಗೆ ಕಾಳಜಿ ಇಲ್ಲ. ಮತ್ತೆ ಮತ್ತೆ ಅರ್ಜಿ ಸಲ್ಲಿಸಬೇಡಿ. ಕೆಲವರು ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದರೆ ಇನ್ನು ಕೆಲವರು ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಮಾಡುತ್ತಾರೆ ಎಂದು ಹೇಳಿದೆ.

ಬಾಕಿ ಇರುವ ಪ್ರಕರಣದೊಂದಿಗೆ ಅರ್ಜಿಯನ್ನು ಸೇರಿಸುವಂತೆ ಲೂತ್ರಾ ಅವರು ಮಾಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಸಂಯುಕ್ತ ಕಿಸಾನ್ ಮೋರ್ಚಾ (ಅರಾಜಕೀಯ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಬ್ಯಾನರ್ ಅಡಿಯಲ್ಲಿ ರೈತರು ಫೆಬ್ರವರಿ 13ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಫೆಬ್ರವರಿ 13ರಂದು ಭದ್ರತಾ ಪಡೆಗಳು ದೆಹಲಿಯತ್ತ ತೆರಳದಂತೆ ತಡೆದವು.

ಪ್ರತಿಭಟನಾನಿರತ ರೈತರು ಡಿಸೆಂಬರ್ 6ರಂದು ದೆಹಲಿ ಪ್ರವೇಶಿಸಲು ಯೋಜಿಸಿದ್ದರು. ಆದರೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ ನಂತರ ತಮ್ಮ ಮೆರವಣಿಗೆಯನ್ನು ಮುಂದೂಡಿದರು. ಭಾನುವಾರ ಅಂದರೆ ಡಿಸೆಂಬರ್ 8ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಮತ್ತೆ ಪ್ರಾರಂಭವಾಯಿತು ಮತ್ತು ಅದೇ ಕಾರಣಕ್ಕಾಗಿ ಮತ್ತೆ ನಿಲ್ಲಿಸಲಾಯಿತು.

ಅರ್ಜಿಯಲ್ಲಿ ಹೇಳಿರೋದೇನು?

ರೈತರು ಮತ್ತು ಅವರ ಸಂಘಟನೆಗಳು ಪಂಜಾಬ್‌ನ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಅನಿರ್ದಿಷ್ಟ ಅವಧಿಯವರೆಗೆ ನಿರ್ಬಂಧಿಸಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಧರಣಿ ನಿರತ ರೈತರು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲು ಹಳಿಗಳನ್ನು ತಡೆಯಬಾರದು ಎಂಬ ಸೂಚನೆಗಳನ್ನು ಅರ್ಜಿದಾರರು ಕೋರಿದ್ದರು.

ದೇಶದ ಉತ್ತರದ ಗಡಿಯತ್ತ ಸೇನೆಯ ಸಂಪೂರ್ಣ ಚಲನೆಯು ಪಂಜಾಬ್ ಮೂಲಕ ಹಾದುಹೋಗುವುದರಿಂದ ಹೆದ್ದಾರಿಗಳನ್ನು ನಿರ್ಬಂಧಿಸುವುದು ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಹೆದ್ದಾರಿಗಳಲ್ಲಿ ಮುಕ್ತ ಸಂಚಾರ ನಾಗರಿಕರ ಮೂಲಭೂತ ಹಕ್ಕಿನ ಅಡಿಯಲ್ಲಿ ಬರುತ್ತದೆ. ಪಂಜಾಬ್ ರಾಜ್ಯದಾದ್ಯಂತ ಹೆದ್ದಾರಿಗಳನ್ನು ನಿರ್ಬಂಧಿಸುವ ಮೂಲಕ ರೈತರು ಅದನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಅದು ಹೇಳಿದೆ.(ಏಜೆನ್ಸೀಸ್​​)

ಸೋಲನ್ನು ಒಪ್ಪಿಕೊಂಡರೆ ಮಾತ್ರ ಹೊರಬರಲು ಸಾಧ್ಯ; ಸಿಎಂ Devendra Fadnavis ಹೀಗಿಳಿದ್ದೇಕೆ?

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…