More

    VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!

    ದೆಹಲಿ: ಇಂದು ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೇಳುತ್ತಿದ್ದರೆ, ಅತ್ತ ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ ಕಟ್ಟೆಹೊಡೆದಿದ್ದು, ದೆಹಲಿಯ ಗಾಜಿಪುರ ರಣರಂಗವಾಗಿದೆ.

    ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಲಕ್ಷಾಂತರ ಟ್ರ್ಯಾಕ್ಟರ್​ಗಳೊಂದಿಗೆ ಗಣರಾಜ್ಯೋತ್ಸವ ಸಮಾರಂಭ ನಡೆಯುತ್ತಿರುವ ರಾಜಪತ್​ದತ್ತ ಲಗ್ಗೆ ಇಡಲು ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನ ತಡೆದಿದ್ದಾರೆ. ನಾಲ್ಕರಿಂದ 5 ಲಕ್ಷ ಟ್ರ್ಯಾಕ್ಟರ್​ಗಳಲ್ಲಿ ಬಂದ ರೈತರನ್ನು ಸಿಂಘು ಗಡಿ ಮತ್ತು ಗಾಜಿಪುರ ಗಡಿಯಲ್ಲೇ ಬ್ಯಾರಿಕೇಡ್​ ಹಾಕಿ ತಡೆಯಲು ಯತ್ನಿಸುತ್ತಿದ್ದರೂ ಸಿಟ್ಟಿಗೆದ್ದ ರೈತರು ಬ್ಯಾರಿಕೇಡ್​ ಮುರಿದು ಒಳನುಗ್ಗಲು ಯತ್ನಿಸಿದ್ದು, ಲಾಠಿಚಾರ್ಜ್ ಮಾಡಲಾಗಿದೆ.

    ರೈತರ ಪ್ರತಿಭಟನೆಯ ಸ್ವರೂಪ ಉಗ್ರವಾಗಿದ್ದು, ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ನಿಲ್ಲೋದಿಲ್ಲ ಎಂದು ಎಚ್ಚರಿಸಿದ್ದಾರೆ. ಪ್ರತಿಭಟನಾಕಾರರು ಕೈಯಲ್ಲಿ ತಲ್ವಾರ್​ ಹಿಡಿದುಕೊಂಡು ಓಡಾಡುತ್ತಿದ್ದು, ದೆಹಲಿಯ ಗಾಜಿಪುರ ರಣರಂಗವಾಗಿದೆ. ರೈತರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಇದೇ ವೇಳೆ ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ಪ್ರತಿಭಟನಾನಿರತ ರೈತರು, ‘2024ರ ವರೆಗೂ ನಾವು ಹೋರಾಟ ಮಾಡಲು ಸಿದ್ಧರಿದ್ದೇವೆ. ಆದರೆ ಪ್ರತಿಭಟನೆ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದರು.

    ಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

    ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರತಿಭಟನಾ‌ ಪರೇಡ್‌: ಪ್ರತಿ ಹಳ್ಳಿಯಿಂದಲೂ ಟ್ರ್ಯಾಕ್ಟರ್‌

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts