More

    ಕುಡಿಯುವ ನೀರಿಗಾಗಿ ಅಧಿಕಾರಿಗಳನ್ನು ಕೂಡಿಹಾಕಿದ ರೈತರು!

    ಬೆಳಗಾವಿ: ಜನ, ಜಾನುವಾರುಗಳಿಗಾಗಿ ಕುಡಿಯುವ ನೀರು ಬಿಡುವಂತೆ ಆಗ್ರಹಿಸಿ ಗೋಕಾಕ-ಮೂಡಲಗಿ ತಾಲೂಕಿನ ರೈತರು ನೀರಾವರಿ ಇಲಾಖೆ ಇಂಜಿನಿಯರ್​​ಗಳನ್ನು ಕೂಡಿಹಾಕಿ ಧರಣಿ ನಡೆಸುತ್ತಿದ್ದಾರೆ.

    ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡಲಾಗಿದೆ. ಆದರೆ ಘಟಪ್ರಭಾ ಬಲದಂಡೆ ಮತ್ತು ಎಡದಂಡೆ ಕಾಲುವೆಗಳಿಗೆ ನೀರು ಬಿಟ್ಟಿಲ್ಲ. ಇದರಿಂದಾಗಿ ಗೋಕಾಕ, ಮೂಡಲಗಿ ತಾಲೂಕು ವ್ಯಾಪ್ತಿಯಲ್ಲಿನ ಕುಲಗೋಡ, ಕೌಜಲಗಿ, ತಿಮ್ಮಾಪೂರ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ನೀರಿನ ಸಮಸ್ಯೆ ಎದುರಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

    ಈ ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲತೆಗಾಗಿ ಘಟಪ್ರಭಾ ಬಲದಂಡೆ ಕಾಲುವೆಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗಮನಕ್ಕೂ ತರಲಾಗಿದೆ. ಆದ್ದರಿಂದ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಕೂಡಲೇ ನೀರು ಬಿಡಬೇಕೆಂದು ಒತ್ತಾಯಿಸಿದರು.
    ರಮೇಶ ಗದಗಿ, ಬಸವರಾಜ ಕಪರಟ್ಟಿ, ಯಲ್ಲಪ್ಪ ಸೌದತ್ತು, ಶಿವಾನಂದ ಬಂಬಲವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರ ಸಾವು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts