More

    ರೈತರಿಗೆ ಗುಣಮಟ್ಟದ ಬೀಜ ವಿತರಿಸಿ- ಸಚಿವ ಸುರೇಶ ಅಂಗಡಿ

    ಬೆಳಗಾವಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿದ್ದು, ರೈತರಿಗೆ ಸಮಯಕ್ಕೆ ಸರಿಯಾಗಿ ಗುಣಮುಟ್ಟದ ಬಿತ್ತನೆ ಬೀಜ ವಿತರಣೆ ಮಾಡಬೇಕು. ಇಲ್ಲವಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

    ನಗರದ ಕಾಡಾ ಕಚೇರಿಯಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಕೆಲ ಭಾಗಗಳಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿದ ಬಗ್ಗೆ ರೈತರಿಂದ ದೂರುಗಳು ಕೇಳಿಬರುತ್ತಿವೆ. ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಬಿತ್ತನೆ ಹಂಗಾಮಿನಲ್ಲಿ ರೈತರಿಗೆ ಕಳಪೆ ಮಟ್ಟದ ಬೀಜಗಳು ವಿತರಣೆಯಾಗದಂತೆ ಹಾಗೂ ಸಕಾಲಕ್ಕೆ ಗೊಬ್ಬರ ಸಿಗವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

    ಉಭಯ ಸರ್ಕಾರಗಳು ಅನ್ನದಾತರ ಅಭಿವೃದ್ಧಿಗೆ ನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಮಾಹಿತಿಯ ಕೊರತೆಯಿಂದಾಗಿ ಹೆಚ್ಚಿನ ಪ್ರಮಾಣದ ರೈತರು ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯೋಜನೆಗಳನ್ನು ಜನರಿಗೆ ತಲುಪಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಬೆಳಗಾವಿ ತಾಲೂಕು ತಹಸೀಲ್ದಾರ್ ಆರ್.ಕೆ. ಕುಲಕರ್ಣಿ, ಕೃಷಿ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಕೋಳೇಕರ್, ತೋಟಗಾರಿಕೆ ಇಲಾಖೆಯ ಡಿಡಿ ರವೀಂದ್ರ ಹಕಾಟೆ, ರುದ್ರೇಗೌಡ ಪಾಟೀಲ, ಮೋಹನ ಅಂಗಡಿ, ರಾಜೀವ ದೇಸಾಯಿ, ಹೇಮಂತ ಪಾಟೀಲ, ವಿನಯ ಕದಂ, ಗ್ರಾಮ ಲೆಕ್ಕಾಧಿಕಾರಿಗಳು, ತಾಲೂಕು ಅಧಿಕಾರಿಗಳು, ರೈತ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts