More

    ರೈತರ ಸಾಲಮನ್ನಾ ಮಾಡಲು ಆಗ್ರಹ

    ಬೆಳಗಾವಿ: ಬರ ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಉಂಟಾಗಿರುವ ತೀವ್ರ ಬರದಿಂದ ರೈತರು ಬೆಳೆಯಿಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರ್ಕಾರವು ಪ್ರತಿ ಎಕರೆಗೆ 3 ರಿಂದ 4 ಸಾವಿರ ರೂ. ವರೆಗೆ ಬರ ಪರಿಹಾರ ಘೋಷಿಸಬೇಕು. ರೈತರು ವಿವಿಧ ಬ್ಯಾಂಕ್‌ಗಳಲ್ಲಿ ಮಾಡಿರುವ ಬೆಳೆಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

    ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬೆಳೆಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಸಂಸದರು, ಶಾಸಕರು ಒತ್ತಡ ಹಾಕಬೇಕು. ಬೆಳೆಸಾಲ ಮರುಪಾವತಿಸದ ರೈತರಿಗೆ ನೋಟಿಸ್ ನೀಡುತ್ತಿರುವ ಬ್ಯಾಂಕ್‌ಗಳ ವಿರುದ್ಧ ಕ್ರಮ ವಹಿಸಬೇಕು. ಯಾವುದೇ ಬೆಳೆಸಾಲ ವಸೂಲಿ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಕೃಷಿ, ಪಶು ಸಂಗೋಪನೆ, ತೋಟಗಾರಿಕೆ ಇಲಾಖೆ ಹಾಗೂ ಶುಗರ್ ಕಮಿಷನರ್ ಇಲಾಖೆಯನ್ನು ಸದೃಢಗೊಳಿಸಬೇಕು. ಇದರಲ್ಲಿ ವಿಫಲವಾದರೆ ಶಾಸಕರ ಗೌರವಧನವನ್ನು ರೈತ ಪರಿಹಾರಕ್ಕೆ ವಿನಿಯೋಗಿಸಬೇಕು ಎಂದೂ ಆಗ್ರಹಿಸಿದರು. ಚೂನಪ್ಪ ಪೂಜಾರಿ, ಪ್ರಕಾಶ ನಾಯಕ, ಸುರೇಶ ಪರಗನ್ನವರ, ಕಿಶನ್ ನಂದಿ, ರಮೇಶ ವಾಲಿ, ಬಬನ ಮಲೈ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts