More

    ಉಗ್ರ ಸ್ವರೂಪ ಪಡೆದ ದೆಹಲಿ ಚಲೋ; ಓರ್ವ ರೈತ ಸಾವು, ಎರಡು ದಿನ ಪ್ರತಿಭಟನೆ ಸ್ಥಗಿತ

    ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಕಾನೂನುಗಳ ಜಾರಿಗೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪೊಲೀಸರ ಜತೆ ಉಂಟಾದ ಸಂಘರ್ಷದಲ್ಲಿ ರೈತರೊಬ್ಬರು ಮೃತಪಟ್ಟಿದ್ದು, ಸಂತಾಪ ದ ಭಾಗವಾಗಿ ಮುಂದಿನ ಎರಡು ದಿನ ಪ್ರತಿಭಟನೆಯನ್ನು ಸ್ಥಗಿತಗೊಳಿಸುವುದಾಗಿ ರೈತ ಸಂಘಟನೆಗಳ ನಾಯಕರು ತಿಳಿಸಿದ್ದಾರೆ.

    ರೈತರ ಬೇಡಿಕೆ ಈಡೇರಿಸುವಂತೆ ಪಂಜಾಬ್‌ನ ಗಡಿ ಪ್ರದೇಶಗಳಾದ ಶಂಭು ಹಾಗೂ ಖನೌರಿಯಲ್ಲಿ ಜಮಾಯಿಸಿರುವ ರೈತರ ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಬುಧವಾರ ಅಶ್ರುವಾಯು ಪ್ರಯೋಗಿಸಿದ್ದಾರೆ. 

    Farmers Protest

    ಇದನ್ನೂ ಓದಿ: ಹಿಂದೂಗಳ ಬಗ್ಗೆ ಅವಹೇಳನಕಾರಿ ಪೋಸ್ಟ್​; ಕ್ಷಮೆ ಕೇಳಿದ 12th ಫೇಲ್​ ನಾಯಕ ನಟ

    ಪಂಜಾಬ್‌ನ ಗಡಿ ಪ್ರದೇಶಗಳಾದ ಶಂಭು ಹಾಗೂ ಖನೌರಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಪೊಲೀಸರು ಡ್ರೋನ್​ಗಳ ಮೂಲಕ ಅಶ್ರುವಾಯು ಪ್ರಯೋಗಿಸಿದರು. ಈ ವೇಳೆ ಆವರಿಸಿದ ದಟ್ಟ ಹೊಗೆಯಿಂದ ಪಾರಾಗಲು ರೈತರು ಮುಖಗವಸು ಹಾಗೂ ಕನ್ನಡಕಗಳನ್ನು ತೊಟ್ಟು ಸುರಕ್ಷಿತ ಸ್ಥಳಗಳತ್ತ ಓಡಲು ಶುರು ಮಾಡಿದ್ದಾರೆ.

    ಈ ವೇಳೆ ಅಖಿಲ ಭಾರತ ಕಿಸಾನ್‌ ಸಭಾದ (AIKS) ಸಂಘಟನೆಯ ಮುಖಂಡರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ. ಮೃತರನ್ನು ಬಟಿಂಡಾ ಮೂಲದ ಶುಭಕರಣ್ ಸಿಂಗ್ (21) ಎಂದು ಗುರುತಿಸಲಾಗಿದ್ದು, ಇವರ ಸಾವಿಗೆ ಪೊಲೀಸರೇ ಕಾರಣ ಎಂದು ರೈತ ಸಂಘಟನೆಗಳು ಆರೋಪಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts