More

    ನಫೆಡ್ ಖರೀದಿ ಕೇಂದ್ರದ ಮುಂದೆ ರೈತರ ಧರಣಿ

    ಹಾಸನ: ಕೊಬ್ಬರಿ ಖರೀದಿ ನೋಂದಣಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ನಫೆಡ್ ಖರೀದಿ ಕೇಂದ್ರದ ಮುಂದೆ ರೈತರು ಪ್ರತಿಭಟನೆ ನಡೆಸಿದರು.


    ಚನ್ನರಾಯಪಟ್ಟಣ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ನಫೆಡ್ ಕೊಬ್ಬರಿ ಖರೀದಿ ಕೇಂದ್ರದಲ್ಲಿ ನಾಲ್ಕು ದಿನಗಳ ಹಿಂದೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜನಸಂದಣಿ ಹೆಚ್ಚಾಗಿರುವುದರಿಂದ ರೈತರಿಗೆ ನೋಂದಣಿಗೆ ಟೋಕನ್ ವಿತರಿಸಿದರು. ಆದರೆ ಶುಕ್ರವಾರ ನೋಂದಣಿ ಪ್ರಕ್ರಿಯೆ ಮುಗಿದಿದೆ ಎಂದು ನಫೆಡ್ ಅಧಿಕಾರಿ ಚೇತನ್ ತಿಳಿಸಿದ್ದರಿಂದ ಆಕ್ರೋಶಗೊಂಡ ರೈತರು ನೆಪಡ್ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಅಣತಿ ಚಂದ್ರಶೇಖರ್, ಜಯರಾಮ ಪ್ರತಿಭಟನೆಗೆ ಬೆಂಬಲ ನೀಡಿದರು.


    ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಮಾತನಾಡಿ, ರೈತರಿಗೆ ಟೋಕನ್ ನೀಡಿದ್ದಾರೆ. ಆದರೆ 300 ರೈತರನ್ನು ನೋಂದಣಿ ಮಾಡಿಲ್ಲ. ಇವರಿಗೆ ಬೇಕಾದವರನ್ನು ಕರೆಸಿ 1000ಕ್ಕೂ ಹೆಚ್ಚು ಹೆಸರು ನೋಂದಾಯಿಸಿದ್ದಾರೆ ಎಂದು ಆರೋಪಿಸಿದರು.


    ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ, ನಪೆಡ್ ಅಧಿಕಾರಿ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡು ನೋಂದಣಿಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದೀರಿ ಎಂದು ಕಿಡಿಕಾರಿದರು.


    ನಾಳೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ನೈಜ ರೈತರಿಗೆ ಅನ್ಯಾಯವಾಗದಂತೆ ನೋಂದಣಿಗೆ ಕ್ರಮ ವಹಿಸುವುದಾಗಿ ತಿಳಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.

    ಕೊಬ್ಬರಿ ಖರೀದಿಗೆ ನಿಗದಿಪಡಿಸಲಾಗಿದ್ದ ಪ್ರಮಾಣ ಮುಗಿದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆಗೆ ನೋಂದಣಿ ಪ್ರಕ್ರಿಯೆ ಸ್ತಬ್ಧವಾಗಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ನೊಂದಣಿ ಪ್ರಕ್ರಿಯೆ ಏಕಕಾಲಕ್ಕೆ ಆರಂಭವಾದ ಹಿನ್ನೆಲೆಯಲ್ಲಿ ನಫೆಡ್ ನಿಗದಿಪಡಿಸಲಾಗಿದ್ದ ಖರೀದಿ ಪ್ರಮಾಣ ಮುಗಿದಿದೆ. ಕಳೆದ ಬಾರಿ 7,600 ರೈತರು ನೋಂದಣಿ ಮಾಡಿಕೊಂಡಿದ್ದು, ಈ ಬಾರಿ 8,314 ರೈತರು ನೋಂದಣಿ ಮಾಡಿ 1.34 ಲಕ್ಷ ಕ್ವಿಂಟಾಲ್ ಕೊಬ್ಬರಿ ಖರೀದಿಗೆ ಅವಕಾಶವಿದೆ. ಆದಾಗ್ಯೂ ತಾಲೂಕಿನಲ್ಲಿ 3.5 ಸಾವಿರ ರೈತರು ನೋಂದಣಿ ಪ್ರಕ್ರಿಯೆಯಿಂದ ಆಚೆ ಉಳಿದಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 50 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರಕ್ಕೆ ಆಗ್ರಹಿಸಿ ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ತರಬೇಕು.
    ಸಿ.ಎನ್.ಪುಟ್ಟಸ್ವಾಮಿಗೌಡ, ನಿರ್ದೇಶಕರು, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts