More

    ರೈತರನ್ನು ತಡೆದ ಪೊಲೀಸರು

    ಮೂಡಲಗಿ: ಕಳೆದ ವರ್ಷ ಪ್ರವಾಹದಿಂದ ಮನೆ-ಮಠ ಕಳೆದುಕೊಂಡ ಸಂತ್ರಸ್ಥರಿಗೆ ಸಮರ್ಪಕವಾಗಿ ಪರಿಹಾರ ಸಿಗದಿದ್ದರಿಂದ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿಯಲ್ಲಿ ಪ್ರತಿಭಟಿಸಲು ತೆರಳುತ್ತಿದ್ದ ರೈತ ಸಂಘದ ಪಧಾದಿಕಾರಿಗಳನ್ನು ಗುರುವಾರ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪೊಲೀಸರು ತಡೆದರು.

    ಕರೊನಾ ವೈರಸ್ ಹಿನ್ನೆಲೆಯಲ್ಲಿ ದೈಹಿಕ ಅಂತರ ಕೊಯ್ದುಕೊಳ್ಳದಿದ್ದರಿಂದ ತಹಸೀಲ್ದಾರ್ ಮೂಲಕ ಡಿಸಿ ಜತೆಗೆ ಮಾತನಾಡಿ ಪ್ರತಿಭಟನಾಕಾರರನ್ನು ಮರಳಿ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಸ್ಥಳೀಯ ಕಲ್ಮೇಶ್ವರ ವೃತ್ತ ಹಾಗೂ ತಹಸೀಲ್ದಾರ್ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ವಿರುದ್ಧ ಧಿಕ್ಕಾರ ಕೂಗಿದರು. ಕಳೆದ ವರ್ಷ ಉಂಟಾದ ಪ್ರವಾಹದಿಂದ ರೈತರು ಮನೆ-ಮಠ ಹಾಗೂ ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಸಂತ್ರಸ್ಥರಿಗೆ ಸರಿಯಾದ ಪರಿಹಾರ ದೊರೆತಿಲ್ಲ. ಕೂಡಲೇ ಸರ್ಕಾರ ಪರಿಹಾರದ ಜತೆಗೆ ಮನೆ ನಿರ್ಮಿಸಿ ಕೊಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಗಣೇಶ ಇಳಿಗೇರ, ಮಹಾದೇವ ಗುಡೇರ, ಸತ್ಯಪ್ಪ ಮಲ್ಲಾಪುರೆ, ಸಿದ್ಧಲಿಂಗ ಬಿಳ್ಳೂರ, ಮಹಾಂತೇಶ ರಡ್ಡೇರಟ್ಟಿ, ಮುತ್ತಪ್ಪ ದ್ಯಾಗಾನವರ ಹಾಗೂ ರೈತ ಸಂಘದ ಪದಾಧಿಕಾರಿಗಳು ಇತರರು ಇದ್ದರು. ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ, ಘಟಪ್ರಭಾ ಪಿಎಸ್‌ಐ ಹಾಲಪ್ಪ ಬಾಲದಂಡಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts