More

    ವಿದ್ಯುತ್ ಏರುಪೇರಿನಿಂದ ಕೃಷಿಕರಿಗೆ ಸಂಕಷ್ಟ

    ಸಾಗರ: ತಾಲೂಕಿನ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಉಂಟಾಗುತ್ತಿರುವ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ನೇತೃತ್ವದಲ್ಲಿ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

    ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ 1500ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿವೆ. ಇವುಗಳಲ್ಲಿ ಬಹುತೇಕ ಕುಟುಂಬಗಳು ಕೃಷಿಯಾಧಾರಿತ ಜೀವನ ನಡೆಸುತ್ತಿವೆ. ಗ್ರಾಪಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಆಗುತ್ತಿರುವುದರಿಂದ ಕೃಷಿಕರಿಗೆ ಮತ್ತು ಗ್ರಾಮಸ್ಥರಿಗೆ ತೀವ್ರ ಅನಾನುಕೂಲ ಉಂಟಾಗುತ್ತಿದೆ ಎಂದು ಪ್ರತಿಭಟನಾನಿರತರು ದೂರಿದರು.
    ನಿರಂತರ ವಿದ್ಯುತ್ ಸಮಸ್ಯೆಯಿಂದಾಗಿ ಕುಡಿಯುವ ನೀರು ಪೂರೈಕೆಯಲ್ಲಿ ಸಹ ವ್ಯತ್ಯಯ ಉಂಟಾಗಿದೆ. ಆಗಾಗ ವಿದ್ಯುತ್ ಕೊಡುತ್ತಿದ್ದರೂ ಅದು ಲೋ ವೋಲ್ಟೇಜ್ ಇರುವುದರಿಂದ ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವಿಪರೀತ ಬಿಸಿಲು ಇರುವುದರಿಂದ ಜಮೀನಿನಲ್ಲಿ ಬೆಳೆಗಳು ಒಣಗುತ್ತಿದೆ. ವಿದ್ಯುತ್ ಸಮಸ್ಯೆ ಬಗೆಹರಿಸಲು ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸದೆ ಇರುವುದು ಖಂಡನೀಯ. ತಕ್ಷಣ ಅಸಮರ್ಪಕ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸದೆ ಹೋದಲ್ಲಿ ಮೆಸ್ಕಾಂ ಕಚೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
    ವೇದಿಕೆ ಅಧ್ಯಕ್ಷ ವಸೀಂ ಉಳ್ಳೂರು, ಪ್ರಮುಖರಾದ ಮಹಾಬಲೇಶ್ವರ್, ವಿನಯ್ ರಾವ್, ಅಸ್ಲಾಂ ಬಾಷಾ, ಪ್ರೇಮ್‌ಕುಮಾರ್, ಮಂಜಪ್ಪ, ದ್ಯಾವಪ್ಪ, ಅಸ್ಪಾಕ್, ಜಾಹೀದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts