More

    ಬೆಳೆ ಉಳಿಸಿಕೊಳ್ಳಲು ಡಿಸಿ ಕಚೇರಿ ಎದುರು ರೈತ ಸಂಘ ಪ್ರತಿಭಟನೆ

    ಶಿವಮೊಗ್ಗ: ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ಹಾಗೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸಾಗರ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ರಾಜ್ಯದಲ್ಲಿ 45 ಲಕ್ಷಕ್ಕಿಂತಲೂ ಹೆಚ್ಚು ರೈತರು ನೀರಾವರಿ ಪಂಪ್‌ಸೆಟ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಈ ಮೂಲಕ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹವೇ ಇಲ್ಲದಂತಾಗಿದೆ. ಬೆಳೆ ಉಳಿಸಿಕೊಳ್ಳಲು ಪಂಪ್‌ಸೆಟ್‌ಗಳ ಮೂಲಕ ನೀರು ಪೂರೈಕೆ ಮಾಡುವುದು ಅನಿವಾರ್ಯವಾಗಿದೆ. ಆದರೆ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಪ್ರಸ್ತುತ ಬಿಸಿಲ ತೀವ್ರತೆಯ ಪ್ರಮಾಣವೂ ಹೆಚ್ಚಿರುವುದರಿಂದ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ರಾತ್ರಿ ಬೇಕಾಬಿಟ್ಟಿಯಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ಯಾವುದೇ ಅನುಕೂಲವಾಗುತ್ತಿಲ್ಲ. ತಕ್ಷಣವೇ ರಾಜ್ಯ ಸರ್ಕಾರ ಹಗಲು ವೇಳೆ ಪಂಪ್‌ಸೆಟ್‌ಗಳಿಗೆ 7 ಗಂಟೆ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಜಿಲ್ಲಾ ಗೌರವಾಧ್ಯಕ್ಷ ಯು.ಪಿ.ಜೋಸೆಫ್, ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನಲ್ಲೂರು, ಪ್ರಧಾನ ಕಾರ್ಯದರ್ಶಿ ಕೆ.ಟಿ.ರಮೇಶ್ ಐಗಿನಬೈಲ್, ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮೀ, ಮುಖಂಡರಾದ ಆಲುಳ್ಳಿ ದೇವು, ದಿನೇಶ್ ಕಾನಗೋಡು, ಕನ್ನಪ್ಪ ಪ್ರತಿಭಟನೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts