More

    ಕಂದಾಯ ಸಚಿವರಿಗೆ ಗಡುವು ನೀಡಿದ ಬೀದರ್ ರೈತರು!

    ಬೀದರ್: ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಬೀದರ್‍ ರೈತರು ಒಂದು ವಾರದ ಗಡವು ನೀಡಿದ್ದಾರೆ. ಅಷ್ಟರೊಳಗಾಗಿ ಬೀದರ್ ಜಿಲ್ಲೆಯ 8 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

    ರಾಜ್ಯಾದ್ಯಂತ ಕೆಲ ಭಾಗಗಳಲ್ಲಿ ಮಳೆಯ ಅಭಾವ ಉಂಟಾಗಿದ್ದು ರೈತರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಘೋಷಣೆ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಬರ ಘೋಷಣೆ ಆದಲ್ಲಿ ರೈತರಿಗೆ ಪರಿಹಾರ ಸಿಗುತ್ತದೆ ಎಂಬ ಹಿನ್ನೆಲೆಯಲ್ಲಿ ಈ ಒತ್ತಾಯ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ರೈತರು, ತಮ್ಮ ಜಿಲ್ಲೆಯಲ್ಲಿ ಮಳೆಯೇ ಆಗದಿರುವುದರಿಂದ ಬರ ಘೋಷಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

    ಬೀದರ್ ರೈತರು, “ಬರೀ ಅಧಿಕಾರಿಗಳ ಸಭೆ ಮಾಡುವದಲ್ಲಿ ಬಿಜಿಯಾದ ಕಂದಾಯ ಸಚಿವರು ನಮ್ಮ ಜಿಲ್ಲೆಯತ್ತ ನೋಡಬೇಕು, ನಮ್ಮ ಕಷ್ಟಕ್ಕೆ ಸ್ಪಂದಿಸಬೇಕು” ಎಂದು ಆಗ್ರಹಿಸುತ್ತಿದ್ದಾರೆ. ರಾಜ್ಯದ ಕಂದಾಯ ಸಚಿವರ ವಿರುದ್ಧ ಬೀದರ್ ರೈತರು ಆಕ್ರೋಶ ವ್ಯಕ್ತಪಡಿಸಿದ್ದು “ಮಳೆ ಕೈಕೊಟ್ಟ ಕಾರಣ ಸಂಕಷ್ಟಕ್ಕೆ ಸಿಲುಕಿದ ರೈತರ ಕಣ್ಣೀರು ಒರೆಸುವ ಕೆಲಸಕ್ಕೆ ಸರ್ಕಾರ ಮತ್ತು ಕಂದಾಯ ಸಚಿವರು ಮುಂದಾಗಿಲ್ಲ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

    ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ಎಕರೆಯಲ್ಲಿ ಬೆಳೆಯಲಾದ ಹೆಸರುಬೇಳೆ, ಉದ್ದಿನಬೇಳೆ, ಸೋಯಾ, ತೋಗರಿಬೇಳೆ ಮುಂತಾದ ಬೆಳೆಗಳು ಇಳುವರಿಗೆ ಬಾರದ ಹಿನ್ನೆಲೆಯಲ್ಲಿ ಅಪಾರ ನಷ್ಟವಾಗಿದೆ. ಸಚಿವರು ನಿರ್ಲಕ್ಷ್ಯ ಮಾಡದೆ ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವ ಮೂಲಕ ಬರ ಪರಿಹಾರ ನೀಡಬೇಕು. ಇಲ್ಲವಾದರೆ ವಾರದ ಬಳಿಕ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts