20.8 C
Bangalore
Sunday, December 8, 2019

ಎಸ್​ಪಿಜಿ ಕಮಾಂಡೋಗಳನ್ನು ಮನೆಯಿಂದ ಹೊರಗೆ ಕಳುಹಿಸಿದ ಫಾರೂಕ್​ ಅಬ್ದುಲ್ಲಾ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್​ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್​ ಅಬ್ದುಲ್ಲಾ ತಮ್ಮ ಭದ್ರತೆಗಾಗಿ ನಿಯೋಜಿಸಲಾಗಿದ್ದ ಎಸ್​ಪಿಜಿ ಕಮಾಂಡೋಗಳನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್​ ಷಾ ವಿರುದ್ಧ ಮಂಗಳವಾರ ಕಿಡಿ ಕಾರಿದ್ದ ಫಾರೂಕ್​ ಅಬ್ದುಲ್ಲಾ ತಮ್ಮನ್ನು ಗೃಹ ಬಂಧನದಲ್ಲಿ ಇಡಲಾಗಿದೆ. ಆದರೆ, ಅಮಿತ್​ ಷಾ ಸಂಸತ್ತಿನಲ್ಲಿ ಸುಳ್ಳು ಹೇಳುತ್ತಿದ್ದಾರೆ. ಕಣಿವೆ ರಾಜ್ಯದಲ್ಲಿ ನಿಷೇಧ ತೆರವುಗೊಂಡ ನಂತರ, ನಮ್ಮವರೆಲ್ಲ ಹೊರಗೆ ಬರುತ್ತಾರೆ. ನಾವು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್​ ಮೊರೆ ಹೋಗುತ್ತೇವೆ. ನಾವು ಬಂದೂಕು ಹಿಡಿದಿಲ್ಲ, ಗ್ರನೇಡ್​ ಎಸೆಯುತ್ತಿಲ್ಲ, ಕಲ್ಲು ತೂರಾಟ ನಡೆಸುತ್ತಿಲ್ಲ, ನಾವು ಶಾಂತಿಯಲ್ಲಿ ನಂಬಿಕೆ ಇಟ್ಟಿದ್ದೇವೆ. ನಾನು ನನ್ನ ಪ್ರಾಣ ತ್ಯಾಗಕ್ಕೂ ಸಿದ್ಧನಿದ್ದೇನೆ, ಗುಂಡು ಹಾರಿಸುವುದಾದರೆ ನನ್ನ ಎದೆಗೆ ಹಾರಿಸಿ, ನನ್ನ ಬೆನ್ನಿಗೆ ಗುಂಡು ಹಾರಿಸಬೇಡಿ ಎಂದು ಷಾ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದರ ಬೆನ್ನಲ್ಲೇ ಬುಧವಾರ ಫಾರೂಕ್​ ಅಬ್ದುಲ್ಲಾ ತಮ್ಮ ಭದ್ರತಾ ಸಿಬ್ಬಂದಿಯನ್ನು ಮನೆಯಿಂದ ಹೊರಗೆ ಕಳುಹಿಸಿ ತಮ್ಮ ಕೋಣೆಯೊಳಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕೇಂದ್ರ ಸರ್ಕಾರ ಮಾಜಿ ಸಿಎಂ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಮಾಜಿ ಸಿಎಂ ಒಮರ್​ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಿತ್ತು. ಆ ನಂತರ ಅವರನ್ನು ಬಂಧಿಸಲಾಗಿತ್ತು. ಜತೆಗೆ ಕಣಿವೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ 100 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. (ಏಜೆನ್ಸೀಸ್​)

ನನ್ನನ್ನು ಮನೆಯಲ್ಲೇ ಬಂಧಿಸಿ ಇಡಲಾಗಿತ್ತು: ಗೃಹ ಸಚಿವರು ಸುಳ್ಳು ಹೇಳಿದ್ದಾರೆ: ಫಾರೂಕ್​ ಅಬ್ದುಲ್ಲಾ

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...